Times Now Survey!: ಎನ್‌ಡಿಎಗೆ 400 ಸ್ಥಾನ ಗೆಲುವು ಡೌಟು?
Team Udayavani, Mar 9, 2024, 6:41 AM IST
ಹೊಸದಿಲ್ಲಿ: ಈಗಲೇ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 378 ಸ್ಥಾನ ಹಾಗೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ 120 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಟೈಮ್ಸ್ ನೌ’ ಮತ್ತು “ಇಟಿಜಿ’ ಸಮೀಕ್ಷೆ ತಿಳಿಸಿದೆ.
ದೇಶದ 543 ಲೋಕಸಭಾ ಸ್ಥಾನಗಳ ಸಮೀಕ್ಷೆಯನ್ನು ಪ್ರಕಟಿಸಲಾಗಿದ್ದು, ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬ ಎನ್‌ಡಿಎ ಮೈತ್ರಿಕೂಟದ ಕನಸು ಕಸನಾಗಿಯೇ ಉಳಿಯುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ. ಆದರೆ ಇದೇ ಮೊದಲ ಬಾರಿಗೆ ಟಿಎಂಸಿ ಭದ್ರಕೋಟೆಯಾದ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲಲಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನಗಳು ಸಂಪೂರ್ಣವಾಗಿ ಎನ್‌ಡಿಎ ಪಾಲಾಗಲಿವೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟ 65 ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ.
2019ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 353, ಕಾಂಗ್ರೆಸ್ ನೇತೃತ್ವದ ಯುಪಿಎ 90 ಮತ್ತು ಇತರು 99 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು. ಇನ್ನು ಇದೇ ಮೊದಲ ಬಾರಿಗೆ ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವ ಸಂಭವವಿದೆ ಎಂದು ಸಮೀಕ್ಷೆ ಹೇಳಿದೆ. ಜ.18ರಿಂದ ಫೆ.28ರ ಅವಧಿಯಲ್ಲಿ ಈ ಸಮೀಕ್ಷೆಯನ್ನು ತಯಾರಿಸಲಾಗಿದೆ.
ಕರ್ನಾಟಕದ 28ರಲ್ಲಿ ಬಿಜೆಪಿಗೆ 22 ಸ್ಥಾನ!
ಟೈಮ್ಸ್‌ನೌ ಸಮೀಕ್ಷೆಯ ಪ್ರಕಾರ ಕರ್ನಾಟಕದ ಒಟ್ಟು 28 ಸ್ಥಾನಗಳಲ್ಲಿ ಬಿಜೆಪಿ 21ರಿಂದ 22 ಸ್ಥಾನಗಳಲ್ಲಿ, ಕಾಂಗ್ರೆಸ್ 4ರಿಂದ 6 ಹಾಗೂ ಜೆಡಿಎಸ್ 1ರಿಂದ2 ಸ್ಥಾನ ಗೆಲ್ಲ ಲಿವೆ. ಕಳೆದ ಚುನಾ ವಣೆಗೆ ಹೋಲಿಸಿದರೆ ಬಿಜೆಪಿ ಒಂದೆರಡು ಸ್ಥಾನಗಳನ್ನು ಕಳೆದುಕೊಳ್ಳ ಲಿದ್ದು, ಕಾಂಗ್ರೆಸ್ ಅದನ್ನು ಗಳಿಸಿಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.