UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್ ಶಾ
Team Udayavani, Apr 29, 2024, 6:23 AM IST
ಕಾಸ್‌ಗಂಜ್ (ಉ.ಪ್ರ.): ಈ ಚುನಾವಣೆ ರಾಮಭಕ್ತರಿಗೆ ಗುಂಡಿಟ್ಟವರು ಮತ್ತು ರಾಮಮಂದಿರ ಕಟ್ಟಿದವರ ನಡುವಿನ ಆಯ್ಕೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ವಿಪಕ್ಷ ನಾಯಕರ ಮೇಲೆ ವಾಗ್ಧಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶದ ಏತ್ ಕಾಸ್‌ಗಂಜ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಸಿಂಗ್ ಪರ ಪ್ರಚಾರ ಮಾಡುವ ವೇಳೆ ಅಮಿತ್ ಶಾ ಈ ಮಾತುಗಳನ್ನು ಆಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಹಾಗೂ ವಿಪಕ್ಷ ನಾಯಕರು ರಾಮಮಂದಿರ ಉದ್ಘಾಟನೆಗೆ ತಪ್ಪಿಸಿಕೊಂಡಿದ್ದನ್ನು ಉಲ್ಲೇಖೀಸಿದ ಅವರು, ಕರಸೇವಕರ ಮೇಲೆ ಗುಂಡು ಹಾರಿಸಿದ್ದು ನಾವೇ ಎಂಬ ಅರಿವು ಕಾಂಗ್ರೆಸ್ ನಾಯಕರಿದೆ. ಹೀಗಾಗಿಯೇ ಅವರು ಉದ್ಘಾಟನೆಯನ್ನು ತಪ್ಪಿಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ “ಬಾಬಾ’ ಹಾಗೂ ಅಖೀಲೇಶ್ ಯಾದವ್ ಅವರು ರಾಮಮಂದಿರ ವಿಷಯವನ್ನು 70 ವರ್ಷಗಳ ಕಾಲ ನನೆಗುದಿಗೆ ಬಿಟ್ಟಿದ್ದರು. ಆದರೆ ನೀವು ಮೋದಿಗೆ 2ನೇ ಅವಧಿಗೆ ಅಧೀಕಾರ ಕೊಟ್ಟ ಕೂಡಲೇ ರಾಮಮಂದಿರ ನಿರ್ಮಾಣವಾಗಿದೆ ಎಂದು ಹೇಳಿದರು.
ಮೀಸಲಾತಿ ರದ್ದು ಇಲ್ಲ: ಎನ್‌ಡಿಎ ಮೈತ್ರಿಕೂಟಕ್ಕೆ 400 ಸ್ಥಾನಗಳು ಬಂದರೆ ಮೀಸಲಾತಿಯನ್ನು ರದ್ದು ಮಾಡಲಾಗುತ್ತದೆ ಎಂದು ವಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಆದರೆ ಬಿಜೆಪಿ ಸರಕಾರ ಯಾವುದೇ ಮೀಸಲಾತಿಯನ್ನು ರದ್ದು ಮಾಡುವುದಿಲ್ಲ. ಮೋದಿ ಅವರ ಆಡಳಿತದ ಅವಧಿಯಲ್ಲೇ ಅತೀಹೆಚ್ಚು ಜನರಿಗೆ ಸೌಲಭ್ಯಗಳು ದೊರಕಿವೆ ಎಂದು ಅವರು ಹೇಳಿದರು. ಈ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದರೆ ದೇಶದ ಬಡಜನರಿಗೆ ನೀಡಲಾಗುತ್ತಿರುವ ಉಚಿತ ಪಡಿತರ ವ್ಯವಸ್ಥೆಯನ್ನು 2029ರ ವರೆಗೆ ಮುಂದುವರಿ ಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.