Congress ಗೆಲ್ಲಿಸಿ ಇಲ್ಲವೇ ಕುರ್ಚಿ ಬಿಡಿ: ಸಚಿವರಿಗೆ ತಾಕೀತು!
ಫಲಿತಾಂಶ ಬಳಿಕ ಪುನಾರಚನೆ ಗ್ಯಾರಂಟಿ ... ಪಟ್ಟು ಹಿಡಿದು ಟಿಕೆಟ್ ಗಿಟ್ಟಿಸಿಕೊಂಡ ಸಚಿವರಿಗೆ ಹೈಕಮಾಂಡ್ ಷರತ್ತು
Team Udayavani, Mar 23, 2024, 6:45 AM IST
ಬೆಂಗಳೂರು: ಸಾಕಷ್ಟು ವಿರೋಧದ ನಡುವೆಯೂ ತಮ್ಮ ಮಕ್ಕಳು, ಕುಟುಂಬ ಸದಸ್ಯ ರಿಗೆ ಟಿಕೆಟ್ ಗಿಟ್ಟಿಸಿಕೊಂಡಿರುವ ಸಚಿ ವರು ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗಳನ್ನು ಗೆಲ್ಲಿಸಿ ಕೊಂಡು ಬರದಿದ್ದರೆ ಕುರ್ಚಿ ಖಾಲಿ ಮಾಡ ಬೇಕಾಗು ತ್ತದೆ ಎಂದು ಸಚಿವ ರಿಗೆ ಕಾಂಗ್ರೆಸ್ ಹೈಕಮಾಂಡ್ ಕಟ್ಟಪ್ಪಣೆ ಮಾಡಿದೆ.
ಆಡಳಿತಾರೂಢ ಕಾಂಗ್ರೆಸ್‌ಗೆ ಈ ಚುನಾವಣೆ ಅತ್ಯಂತ ಪ್ರತಿಷ್ಠೆ ಮಾತ್ರವಲ್ಲದೆ ಸವಾಲು ಕೂಡ ಆಗಿದೆ. ಕಳೆದ ಲೋಕಸಭಾ ಚುನಾವಣೆ ಸಂದರ್ಭ ದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರ ವಿದ್ದರೂ ತಲಾ ಒಂದೊಂದು ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಯಿತು. ಉಳಿ ದಂತೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಬಿಟ್ಟರೆ ಉಳಿದೆಲ್ಲ 25 ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದವು. ಆದರೆ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಸರಕಾರವೇ ಇರುವುದರಿಂದ ಕನಿಷ್ಠ 20 ಕ್ಷೇತ್ರ ಗಳಲ್ಲಿ ಗೆಲ್ಲಲೇ ಬೇಕೆಂಬ ಲೆಕ್ಕಾಚಾರದಲ್ಲಿ ಹಲವು ಬಗೆಯ ಸವಾಲು ಸ್ವೀಕರಿಸಿ ಸಚಿವರ ಬೇಡಿಕೆಗಳಿಗೆ ಮನ್ನಣೆ ನೀಡಿರುವ ಹೈಕಮಾಂಡ್, ಗೆದ್ದುಕೊಂಡು ಬರ ಬೇಕೆಂಬ ಗುರಿ ನೀಡಿದೆ. ಹೀಗಾಗಿ ಸಚಿವರು “ಮಾಡು ಇಲ್ಲವೇ ಮಡಿ’ ಎಂಬ ಸ್ಥಿತಿಯಲ್ಲಿದ್ದಾರೆ. ಗೆದ್ದರೆ ಮಕ್ಕಳು ಲೋಕಸಭೆ ಪ್ರವೇಶಿಸುತ್ತಾರೆ, ಸೋತರೆ ಅಪ್ಪಂದಿರು ಮನೆಗೆ ಹೋಗುತ್ತಾರೆ ಎಂಬ ಚರ್ಚೆ ಆರಂಭವಾಗಿದೆ.
ಸಬೂಬು ಹೇಳದೆ ಸಚಿವ ಸ್ಥಾನ ಬಿಡಬೇಕು
ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಇದು ವರೆಗೆ ಪ್ರಕಟಿಸಿರುವ 24 ಕ್ಷೇತ್ರಗಳ ಅಭ್ಯರ್ಥಿ ಗಳ ಪೈಕಿ 14 ಕ್ಷೇತ್ರಗಳ ಟಿಕೆಟ್‌ಗಳು ಸಚಿವರ ಪುತ್ರರು, ಪುತ್ರಿಯರು, ಪತ್ನಿ ಹಾಗೂ ಸಹೋದರರ ಪಾಲಾಗಿವೆ. ಚುನಾವಣೆಯನ್ನು ಗೆಲ್ಲಲೇಬೇಕೆಂಬ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ, ಚುನಾವಣೆ ನಿರ್ವಹಣೆ ಎಲ್ಲವನ್ನೂ ಪಕ್ಷ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಹಿಸಿದ್ದರಿಂದ “ತನು-ಮನ-ಧನ’ ಎಲ್ಲವನ್ನೂ ಖರ್ಚು ಮಾಡಿ ಯಾರನ್ನೋ ಗೆಲ್ಲಿಸುವ ಬದಲು ತಮ್ಮವರನ್ನೇ ಗೆಲ್ಲಿಸುವುದು ಸೂಕ್ತ ಎಂಬ ತೀರ್ಮಾನಕ್ಕೆ ಬಂದ ಸಚಿವರು, ಕುಟುಂಬ ಸದಸ್ಯರಿಗೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಈಗ ಅವರ ಮುಂದೆ ದೊಡ್ಡ ಸವಾಲು ಇದೆ. ತಮ್ಮವರನ್ನು ಗೆಲ್ಲಿಸಿಕೊಂಡು ಬಾರದಿದ್ದರೆ ಫಲಿತಾಂಶದ ಬಳಿಕ ನೈತಿಕ ಹೊಣೆ ಹೊತ್ತು ಯಾವುದೇ ಸಬೂಬು ಹೇಳದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಇಂತಹ ಒಂದು ಸಂದೇಶವನ್ನು ಕಾಂಗ್ರೆಸ್ ವರಿಷ್ಠರು ಟಿಕೆಟ್ ಗಿಟ್ಟಿಸಿರುವ ಸಚಿವರಿಗೆ ನೀಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಫಲಿತಾಂಶ ಬಳಿಕ ಪುನಾರಚನೆ ಗ್ಯಾರಂಟಿ
ಚುನಾವಣೆ ಫಲಿತಾಂಶ ಜೂ. 4ರಂದು ಹೊರಬೀಳಲಿದ್ದು, ಅನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಪುನಾರಚನೆ ಖಚಿತ ಎಂಬ ಮಾತು ಈಗ ಕಾಂಗ್ರೆಸ್ ಪಕ್ಷದೊಳಗೆ ಹರಿದಾಡುತ್ತಿದೆ. ಈ ನಡುವೆ ಹೈಕಮಾಂಡ್ ಸಚಿವರಿಗೆ ಕೊಟ್ಟಿರುವ ಹೊಣೆ ನೋಡಿದ ಮೇಲಂತೂ ಪುನಾರಚನೆಯಲ್ಲಿ ತಮಗೆ ಸಚಿವ ಸ್ಥಾನ ಕೂಡ ಖಚಿತ ಎಂಬ ನಿರೀಕ್ಷೆಯಲ್ಲಿ ಸಚಿವಾಕಾಂಕ್ಷಿಗಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.