ಪವರ್ ಗ್ರಿಡ್ ಸಂಸ್ಥೆ
Team Udayavani, Dec 2, 2019, 1:15 AM IST
ಬೆಂಗಳೂರಿನಲ್ಲಿರುವ ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 35 ಡಿಪ್ಲೊಮಾ ಟ್ರೈನಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಡಿಪ್ಲೊಮಾದಲ್ಲಿ ಕನಿಷ್ಠ ಶೇ.70 ಅಂಕಗಳನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್ 16
https://careers.powergrid.in
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಶುಶ್ರೂಷಕಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. 552 ಹುದ್ದೆಗಳು ಖಾಲಿ ಇದ್ದು ಕರ್ನಾಟಕದ ವಿವಿಧೆಡೆ ನೇಮಕಾತಿ ಮಾಡ ಲಾಗುತ್ತದೆ. ಬಿಎಸ್ಸಿ ನರ್ಸಿಂಗ್ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
https://nhm.gov.in/
ಕೊನೆಯ ದಿನಾಂಕ ಡಿಸೆಂಬರ್ 10
ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಆ್ಯಂಡ್ ಎಜುಕೇಶನ್ ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಆ್ಯಂಡ್ ಎಜುಕೇಶನ್ ಸಂಸ್ಥೆಯಲ್ಲಿ ಕ್ಲಾರ್ಕ್, ಟೆಕ್ನೀಶಿಯನ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಎಸೆಸೆಲ್ಸಿ, ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://www.icfre.org/
ಕೊನೆಯ ದಿನಾಂಕ ಜನವರಿ 16
ರೈಲ್ವೇ ಇಲಾಖೆ
ರೈಲ್ವೇ ಇಲಾಖೆಯ ನೈಋತ್ಯ ವಿಭಾಗದಲ್ಲಿ ಅಪ್ರಂಟಿಸ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಫಿಟ್ಟರ್, ವೆಲ್ಡರ್, ಎಲೆಕ್ಟ್ರೀಶಿಯನ್, ಕಾಪೆìಂಟರ್, ಟರ್ನರ್ ಸಹಿತ 1,104 ಹುದ್ದೆಗಳು ಖಾಲಿ ಇವೆ. ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://www.indianrail.gov.in/
ಕೊನೆಯ ದಿನಾಂಕ ಡಿಸೆಂಬರ್ 25
ಭಾರತೀಯ ಅಂಚೆ ಇಲಾಖೆ
ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್, ವಿಂಗಡಣೆ ಸಹಾಯಕ, ಪೋಸ್ಟ್‌ಮ್ಯಾನ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸಹಿತ ಒಟ್ಟು 231 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಕ್ರೀಡಾ ಕೋಟಾದಲ್ಲಿ ನೇಮಕಾತಿ ಮಾಡ ಲಾಗುತ್ತದೆ. ಎಸೆಸೆಲ್ಸಿ, ಪಿಯುಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
https://www.indiapost.gov.in/
ಕೊನೆಯ ದಿನಾಂಕ ಡಿಸೆಂಬರ್ 31
ಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,314 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು ಯಾವುದೇ ಪದವಿ ಪಡೆದ, 5 ವರ್ಷ ಕಾನ್‌ಸ್ಟೆಬಲ್ ಅಥವಾ ಹೆಡ್ ಕಾನ್‌ಸ್ಟೆಬಲ್ ಆಗಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ: 35 ವರ್ಷಗಳು.
https://www .cisf.gov.in
ಕೊನೆಯ ದಿನಾಂಕ ಡಿಸೆಂಬರ್ 9
ನ್ಯಾಷನಲ್ ಇನ್ನೊವೇಶನ್ ಫೌಂಡೇಶನ್
ನ್ಯಾಷನಲ್ ಇನ್ನೊವೇಶನ್ ಫೌಂಡೇಶನ್‌ನಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://nif.org.in /
ಕೊನೆಯ ದಿನಾಂಕ ಡಿಸೆಂಬರ್ 14
ಪ್ರಾದೇಶಿಕ ಜೈವಿಕ, ತಂತ್ರಜ್ಞಾನ ಕೇಂದ್ರ
ಪ್ರಾದೇಶಿಕ ಜೈವಿಕ ತಂತ್ರಜ್ಞಾನ ಕೇಂದ್ರದಲ್ಲಿ ಡೀನ್ ಮತ್ತು ಅಸೋಸಿಯೇಟ್ ಡೀನ್ ಹುದ್ದೆ ಖಾಲಿ ಇದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 18 ವರ್ಷಗಳ ಕಾಲ ಬೋಧಕರಾಗಿ ಅನುಭವವಿರುವ, ವಿಜ್ಞಾನ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
htt ps://www .rcb.res.in/
ಕೊನೆಯ ದಿನಾಂಕ ಡಿಸೆಂಬರ್ 15
ಭಿಲಾಯಿ ಸ್ಟೀಲ್ ಪ್ಲಾಂಟ್
ಭಿಲಾಯಿ ಸ್ಟೀಲ್ ಪ್ಲಾಂಟ್ ಸಂಸ್ಥೆಯಲ್ಲಿ ವ್ಯವಸ್ಥಾಪಕ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿ.ಇ., ಬಿ.ಟೆಕ್ ಪದವಿ ಮತ್ತು 7 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
https://www.sailcareers.com/
ಕೊನೆಯ ದಿನಾಂಕ ಜನವರಿ 4
ವೈದ್ಯಕೀಯ ಸೇವಾ ನೇಮಕಾತಿ ಮಂಡಳಿ
ವೈದ್ಯಕೀಯ ಸೇವಾ ನೇಮಕಾತಿ ಮಂಡಳಿಯಲ್ಲಿ 1,508 ಪ್ರಯೋಗಾಲಯ ತಂತ್ರಜ್ಞ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://www.msrb.org/
ಕೊನೆಯ ದಿನಾಂಕ ಡಿಸೆಂಬರ್ 9
ಮೈಸೂರು ವಿಶ್ವವಿದ್ಯಾನಿಲಯ
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕಿರಿಯ ಸಂಶೋಧಕ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಎಂಎಸ್‌ಡಬ್ಲ್ಯು, ಎಂ.ಇಡಿ, ನೆಟ್ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://www.uni-mysore.ac.in/
ಕೊನೆಯ ದಿನಾಂಕ ಡಿಸೆಂಬರ್ 3
ಭಾರತೀಯ ವಾಯುಪಡೆ
ಭಾರತೀಯ ವಾಯುಪಡೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.
https://www.joinindiannavy.gov.in/
ಕೊನೆಯ ದಿನಾಂಕ ಡಿಸೆಂಬರ್ 30
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ 71 ಟೆಕೆ°ಶಿಯನ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ,ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದು
https://ntro.gov.in/
ಕೊನೆಯ ದಿನಾಂಕ ಡಿಸೆಂಬರ್ 23
ದಕ್ಷಿಣ ರೈಲ್ವೇ ಇಲಾಖೆ
ದಕ್ಷಿಣ ರೈಲ್ವೇ ಇಲಾಖೆಯಲ್ಲಿ ಫಿಟ್ಟರ್, ವೆಲ್ಡರ್ ಸಹಿತ 3,585 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಐಟಿಐ , ಪಿಯುಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://www.indianrail.gov.in/
ಕೊನೆಯ ದಿನಾಂಕ ಡಿಸೆಂಬರ್ 31
ಎಐಐಎಂಎಸ್
ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಹೃಷಿಕೇಶದಲ್ಲಿ 372 ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿ.ಎಸ್ಸಿ ಇನ್ ನರ್ಸಿಂಗ್ /ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಅಥವಾ ಡಿಪ್ಲೊಮಾ ಇನ್ ನರ್ಸಿಂಗ್ ಅನ್ನು ಇಂಡಿಯನ್ ನರ್ಸಿಂಗ್ ಕೌನ್ಸಿಲ್‌ನಿಂದ ಅಂಗೀಕೃತಗೊಂಡ ಸಂಸ್ಥೆಗಳು ಅಥವಾ ವಿ.ವಿ.ಗಳಲ್ಲಿ ಪಡೆದಿರಬೇಕು.
www .aiimsrishikesh.edu.in
ಕೊನೆಯ ದಿನಾಂಕ ಡಿಸೆಂಬರ್ 24
ಎಲೆಕ್ಟ್ರಾನಿಕ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್
ಎಲೆಕ್ಟ್ರಾನಿಕ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆಗಳು ಖಾಲಿ ಇದ್ದು ಅರ್ಜಿಗಳನ್ನು ಆಹ್ವಾನಿಸಿದೆ. ಎಂಜಿನಿಯರಿಂಗ್ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
http://www.ecil.co.in/
ಕೊನೆಯ ದಿನಾಂಕ ಡಿಸೆಂಬರ್ 5
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿ.
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ವೈದ್ಯಕೀಯ ಅಧಿಕಾರಿ, ನರ್ಸ್ ಮೈನಿಂಗ್ ಫೋರ್ ಮ್ಯಾನ್, ಅಟೆಂಡರ್, ಟೆಕ್ನೀಷಿಯನ್ ಸಹಿತ 148 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಬಿಡಿಎಸ್, ನರ್ಸಿಂಗ್, ಎಸೆಸೆಲ್ಸಿ, ಪಿಯುಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
https://www.sailcareers.com
ಕೊನೆಯ ದಿನಾಂಕ ಡಿಸೆಂಬರ್ 31
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.