![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 20, 2022, 1:06 PM IST
ನವದೆಹಲಿ: ಬಿಜೆಪಿ ಹೈಕಮಾಂಡ್ ವಿರುದ್ಧ ಆಗಾಗ ಟೀಕಾಸ್ತ್ರ ಪ್ರಯೋಗಿಸುತ್ತಲೇ ಇರುವ ಸಂಸದ ವರುಣ್ ಗಾಂಧಿ ಪಂಚರಾಜ್ಯಗಳ ಚುನಾವಣೆ ಹೊಸ್ತಿಲಲ್ಲಿ ನಿರುದ್ಯೋಗ ಸಮಸ್ಯೆ ಬಗ್ಗೆ ಮಾಡಿರುವ ಟ್ವೀಟ್ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.
ರಾಷ್ಟ್ರೀ ಯ ದೈನಿಕವೊಂದಕ್ಕೆ ತಾವು ಬರೆದ ಲೇಖನವನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ವರುಣ್ ಗಾಂಧಿ “ ಅಭಿವೃದ್ಧಿಯ ಕುರಿತಾಗಿನ ಎಲ್ಲ ಚರ್ಚೆಗಳ ಹೊರತಾಗಿಯೂ ಚುನಾವಣೆಯ ಹೊಸ್ತಿಲಲ್ಲಿ ಇರುವ ಪಂಚರಾಜ್ಯಗಳಲ್ಲಿ ನಿರುದ್ಯೋಗ ಸಮಸ್ಯೆ ವಿಪರೀತವಾಗಿದೆ ಎಂದು ಅಂಕಿಸಂಖ್ಯೆಗಳು ಹೇಳುತ್ತಿರುವುದು ಸುಳ್ಳಲ್ಲ’’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವರುಣ್ ಗಾಂಧಿಯವರ ಈ ಅನಿಸಿಕೆ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. “ರಾಜಕೀಯ ಜನಪ್ರಿಯತೆಯ ಗಳಿಕೆಯ ಜತೆಗೆ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು ಈ ಕ್ಷಣದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸರಕಾರಗಳು ಗಮನ ಹರಿಸಬೇಕು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.
Despite all the talk of development, statistics show that unemployment has grown in all poll-bound states. Instead of political populism, we need to urgently focus on incentivising job creation.
My article in The Indian Express today. https://t.co/Egz7NyM0kY pic.twitter.com/sqSkv9TqO8
— Varun Gandhi (@varungandhi80) January 20, 2022
ಕೆಲ ದಿನಗಳ ಹಿಂದೆ ತಮ್ಮ ಸ್ವಕ್ಷೇತ್ರ ಪಿಲ್‌ಬಿತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ದೇಶದಲ್ಲಿ ಹಣದುಬ್ಬರದ ದರ ಆಕಾಶ ತಲುಪುತ್ತಿದೆ. ನಿರುದ್ಯೋಗ ಸಮಸ್ಯೆ ಅಂಕೆ ಮೀರಿದೆ ಎಂದು ವರುಣ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.