ಕೃಷಿ ಟ್ರೇಡರ್ಸ್‌ಗಳ ಸಾಲ ಪಡೆಯುವ ಪ್ರಕ್ರಿಯೆಯನ್ನು ಸುಲಭಗೊಳಿಸಿದ ‘ಅಗ್ರಿ ಫೈ’ ಆ್ಯಪ್


Team Udayavani, Dec 26, 2021, 3:54 PM IST

ಕೃಷಿ ಟ್ರೇಡರ್ಸ್‌ಗಳ ಸಾಲ ಪಡೆಯುವ ಪ್ರಕ್ರಿಯೆಯನ್ನು ಸುಲಭಗೊಳಿಸಿದ ‘ಅಗ್ರಿ ಫೈ’ ಆ್ಯಪ್

ಬೆಂಗಳೂರು: ದೊಡ್ಡ ಕಂಪನಿಗಳಲ್ಲಿ ಉದ್ಯೋಗ ಮಾಡುತ್ತಾ ತಿಂಗಳ ವೇತನ ಪಡೆಯುವವರಿಗೆ ಬ್ಯಾಂಕ್‌ಗಳು ನಾ ಮುಂದು ತಾ ಮುಂದು ಎಂದು ಕ್ರೆಡಿಟ್ ಕಾರ್ಡ್, ಸಾಲಸೌಲಭ್ಯ ನೀಡುತ್ತವೆ. ಆದರೆ, ದೇಶದ ಬೆನ್ನೆಲುಬು ಎನಿಸಿಕೊಂಡಿರುವ ರೈತನಿಗೆ ಸಾಲ ಎಂಬುದು ಸುಲಭದ ಮಾತಲ್ಲ. ಕೃಷಿಕನ ಸಂಕಷ್ಟಗಳು ಒಂದೆರಡಲ್ಲ. ಸರಿಯಾದ ಸಮಯಕ್ಕೆ ಮಳೆ ಬರುವುದಿಲ್ಲ, ಒಂದು ವೇಳೆ ಮಳೆ ಬಂದರೆ ಬೀಜ ಮತ್ತು ರಸಗೊಬ್ಬರ ಸಿಗುವುದಿಲ್ಲ. ಎಷ್ಟೋ ಬಾರಿ ಹಣಕಾಸಿನ ಮುಗ್ಗಟ್ಟಿನಿಂದಲೇ ತಡವಾಗಿ ಬಿತ್ತನೆ ಮಾಡಿ ಬೆಳೆ ನಷ್ಟದಂತಹ ಸಮಸ್ಯೆಗಳಿಗೆ ಒಳಗಾಗಿ ಸಾಲದ ಸುಳಿಯಲ್ಲಿ ಸಿಲುಕುತ್ತಾನೆ. ಗ್ರಾಮೀಣ ಭಾಗದ ರೈತರು ಈಗಲೂ ತಮಗೆ ಸಾಲ ಸೌಲಭ್ಯ ಬೇಕು ಎಂದರೆ ಬ್ಯಾಂಕ್‌ ಗಳಿಗಿಂತ ಹೆಚ್ಚಾಗಿ ಬೀಜ, ರಸಗೊಬ್ಬರ ಮಾರಾಟ ಮಾಡುವ ಕೃಷಿ ವ್ಯಾಪಾರಸ್ಥರನ್ನೇ ಅವಲಂಬಿಸಿದ್ದಾರೆ.

ಎಪಿಎಂಸಿ ಮಾರುಕಟ್ಟೆಗಳು, ಗಂಜ್‌ಗಳಲ್ಲಿ ಇರುವಂತಹ ಇಂತಹ ಕೃಷಿ ವ್ಯಾಪಾರಸ್ಥರು ಸೀಮಿತ ರೈತರಿಗೆ ಆ ವರ್ಷಕ್ಕೆ ಬೇಕಾದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಒದಗಿಸುತ್ತಾರೆ. ವರ್ಷದ ಬೆಳೆ ಬಂದ ನಂತರ ಅದನ್ನು ಅವರ ಬಳಿಯೇ ಮಾರಾಟ ಮಾಡಬೇಕು. ಹಿಂದೆ ತಾವು ನೀಡಿದ ಸಾಲವನ್ನು ಮರುಪಾವತಿ ಮಾಡಿಕೊಂಡು ಬಾಕಿ ಹಣ ರೈತನಿಗೆ ಕೊಡುತ್ತಾರೆ. ಇದು ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಪದ್ಧತಿ, ಹೆಚ್ಚಿನ ಕಡೆ ರೈತರು ಇದೇ ವ್ಯವಸ್ಥೆಯನ್ನು ಈಗಲೂ ಅವಲಂಬಿಸಿದ್ದಾರೆ.

ಈ ರೀತಿಯ ಕೃಷಿ ವ್ಯಾಪಾರಸ್ಥರೂ ಸಹ ಸೀಮಿತವಾಗಿಯೇ ತಮ್ಮ ವ್ಯವಹಾರ ನಡೆಸುತ್ತಾರೆ. ಅವರಲ್ಲಿರುವ ಸೀಮಿತ ಹಣಕಾಸು ವ್ಯವಸ್ಥೆಯಡಿ ಕೆಲವೇ ಕೆಲವು ರೈತರೊಂದಿಗೆ ವ್ಯವಹಾರ ನಡೆಸುತ್ತಾರೆ. ಇಂತಹ ಕೃಷಿ ವ್ಯಾಪಾರಸ್ಥರನ್ನು ಗುರುತಿಸಿ ಅವರ ಸಿಬಿಲ್ ಸ್ಕೋರ್ ಹೆಚ್ಚಿಸುವ ಮೂಲಕ, ಸಾಲ ಸೌಲಭ್ಯದ ನೆರವು ಒದಗಿಸಿ ಆ ಮೂಲಕ ರೈತರಿಗೆ ಸಕಾಲಕ್ಕೆ ಎಲ್ಲ ನೆರವೂ ಸಿಗುವಂತಹ ಉದ್ದೇಶದೊಂದಿಗೆ ‘ಅಗ್ರಿಫೈ’ ಸ್ಟಾರ್ಟಪ್‌ ಕಾರ್ಯ ಆರಂಭಿಸಿದೆ. ಈಗಾಗಲೇ ಹಲವು ಜಿಲ್ಲೆಗಳ ರೈತರು ಅಗ್ರಿಫೈ ಮೂಲಕ ಸಾಲಸೌಲಭ್ಯ ಪಡೆದಿದ್ದಾರೆ.

ಏನಿದು ಅಗ್ರಿಫೈ

ಸ್ಟಾರ್ಟಪ್ ಎಂದರೆ ಹೆಚ್ಚಾಗಿ ತಂತ್ರಜ್ಞಾನ ಆಧಾರಿತವಾಗಿ ಇರುವುದು ಸಾಮಾನ್ಯ. ಆದರೆ, ಕೃಷಿ ತಂತ್ರಜ್ಞಾನ ಕ್ಷೇತ್ರದಲ್ಲಿಯೇ ಕೆಲಸ ಮಾಡುತ್ತಿದ್ದಂತಹ ಅಭಿಲಾಷ್ ತಿರುಪತಿ, ಕೆ.ಆರ್. ರಘುಚಂದ್ರ ಮತ್ತು ಮಿತಿಲೇಶ್ ಕುಮಾರ್ ಎಂಬುವವರು ಅಗ್ರಿನ್ನೋವ್ ಟೆಕ್ನಾಲಜೀಸ್ ಪ್ರೈ.ಲಿ. ಎಂಬ ಕಂಪನಿ ಸ್ಥಾಪಿಸಿ ಆ ಮೂಲಕ ‘ಅಗ್ರಿ ಫೈ’ (Agrifi) ಹೆಸರಿನಲ್ಲಿ ಕೃಷಿ ಕ್ಷೇತ್ರದ ಒಟ್ಟಾರೆ ಬೆಳವಣಿಗೆಗಾಗಿ ಸ್ಟಾರ್ಟಪ್ ಯೋಜನೆಗಳನ್ನು ರೂಪಿಸಿದ್ದಾರೆ.

ಅಗ್ರಿ ಫೈ ಮೂಲಕ ಈಗಾಗಲೇ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕೇರಳದಲ್ಲಿ ಕೃಷಿ ಟ್ರೇಡರ್ಸ್‌ಗಳನ್ನು ಹುಡುಕಿ ಅವರಿಗೆ ಸಾಲದ ನೆರವು ಒದಗಿಸುತ್ತದೆ. ರೈತರಿಗೆ ಸಾಲಸೌಲಭ್ಯ ನೀಡುವಂತಹ ವ್ಯಾಪಾರಸ್ಥರಿಗೆ ಸಾಲಸೌಲಭ್ಯ ಒದಗಿಸಿ ಆ ಮೂಲಕ ಹೆಚ್ಚಿನ ರೈತರಿಗೆ ಸಾಲದ ನೆರವು ಒದಗಿಸಬೇಕು ಎಂಬುದು ಅಗ್ರಿಫೈನ ಮುಖ್ಯ ಉದ್ದೇಶ.

ಸಾಲ ಬೇಕೆಂದರೆ ಏನು ಮಾಡಬೇಕು?

ನೀವೂ ಸಹ ಕೃಷಿ ಕ್ಷೇತ್ರದಲ್ಲಿ ಟ್ರೇಡರ್ಸ್ ಆಗಿದ್ದು, ನಿಮಗೂ ಸಾಲಸೌಲಭ್ಯ ದೊರಕಬೇಕು ಎಂಬ ಇಚ್ಛೆ ಇದ್ದರೆ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಕೃಷಿ ಖಾತಾ (Krishi Khata) ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. ಅಲ್ಲಿ ಕೇಳಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಅಗ್ರಿಫೈ ಕಡೆಯಿಂದ ನಿಮ್ಮ ದಾಖಲೆಗಳನ್ನು ಪರಿಶೀಲಿಸಿ ಬ್ಯಾಂಕ್ ಅಥವಾ ಖಾಸಗಿ ಹಣಕಾಸು ಸಂಸ್ಥೆಗಳಿಂದ ನಿಮಗೆ ಸಾಲದ ನೆರವು ಒದಗಿಸಿಕೊಡುತ್ತಾರೆ. ಇನ್ನು ನಿಮ್ಮ ಸಿಬಿಲ್ ಸಂಖ್ಯೆ ಕಡಿಮೆ ಇದ್ದರೂ ಸಹ ನಿಮ್ಮ ವಹಿವಾಟು ಪರಿಗಣಿಸಿ ಸಾಲದ ನೆರವು ಒದಗಿಸಲೂ ಪ್ರಯತ್ನಿಸಲಾಗುತ್ತದೆ.

“ಕೃಷಿ ವ್ಯಾಪಾರಸ್ಥರು ಅಥವಾ ರೈತರು ಈ ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ಬಳಿಕ ತಮ್ಮ ದೈನಂದಿನ ವಹಿವಾಟನ್ನು ಅದರಲ್ಲಿ ದಾಖಲಿಸಬೇಕು. ಇದಕ್ಕಾಗಿಯೇ ಆ್ಯಪ್‌ ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗೆ ತಮ್ಮ ವಹಿವಾಟು ದಾಖಲಿಸುವುದರಿಂದ ಸಿಬಿಲ್ ಸ್ಕೋರ್ ಹೆಚ್ಚಿಸಲು ಇದೂ ಸಹ ನೆರವಾಗುತ್ತದೆ. ಕೃಷಿ ವ್ಯಾಪಾರಸ್ಥರು ಹೀಗೆ ಕೃಷಿ ಖಾತಾದಲ್ಲಿ ದಾಖಲಿಸಿರುವ ಅಂಕಿ ಅಂಶಗಳನ್ನು ಗಮನಿಸಿ ಅವರಿಗೆ ವಿಶೇಷ ಸ್ಕೋರ್ ಸಿದ್ಧಪಡಿಸಲಾಗುತ್ತದೆ. ಅವರ ವೈಯಕ್ತಿಕ ಸಿಬಿಲ್ ಮತ್ತು ಪ್ರತಿನಿತ್ಯದ ವಹಿವಾಟಿನ ಸ್ಕೋರ್ ಎರಡನ್ನೂ ಪರಿಗಣಿಸಿ ಅಗ್ರಿಫೈ ಸಂಸ್ಥೆಯು ವ್ಯಾಪಾರಸ್ಥರ ಪರವಾಗಿ ಬ್ಯಾಂಕ್ ಅಥವಾ ಖಾಸಗಿ ಹಣಕಾಸು ಸಂಸ್ಥೆಗಳ ಮುಂದೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿ ಸಾಲ ಒದಗಿಸಲು ಸಹಾಯ ಮಾಡುತ್ತಾರೆ. ಆ ಮೂಲಕ ಸುಲಭವಾಗಿ ಸಾಲದ ನೆರವು ಒದಗಿಸಬಹುದು” ಎನ್ನುತ್ತಾರೆ ಅಗ್ರಿಫೈ ಸ್ಟಾರ್ಟ್‌ಪ್‌ ನ ಮಾತೃ ಸಂಸ್ಥೆ ಅಗ್ರಿನ್ನೋವ್ ಟೆಕ್ನಾಲಜೀಸ್ ಪ್ರೈ.ಲಿ. ಸಹ ಸ್ಥಾಪಕ ಕೆ.ಆರ್. ರಘುಚಂದ್ರ.

ಸದ್ಯ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸುತ್ತಿರುವವರು ಈ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಸಾಲಕ್ಕಾಗಿಯೂ ಅರ್ಜಿ ಸಲ್ಲಿಸಿದ್ದಾರೆ. ನಮ್ಮ ಸಿಬ್ಬಂದಿ ಅವರ ವಹಿವಾಟು ಬಗ್ಗೆ ವರದಿ ತಯಾರಿಸಿ ಸಾಲ ಕೊಡಿಸಲು ನೆರವು ನೀಡುತ್ತಿದ್ದಾರೆ. ಇಡೀ ದೇಶದಲ್ಲಿ ಒಟ್ಟಾರೆ ಐದು ಮಿಲಿಯನ್ ವ್ಯಾಪಾರಸ್ಥರನ್ನು ಈ ವ್ಯವಸ್ಥೆಯಡಿ ತರುವ ಉದ್ದೇಶ ಹೊಂದಲಾಗಿದೆ ಎಂದು ರಘುಚಂದ್ರ ವಿವರಿಸಿದರು.

ನಿತ್ಯ ಕೃಷಿ ಮಾಹಿತಿ

‘ಕೃಷಿ ಖಾತಾ ಆ್ಯಪ್ ಮೂಲಕ ರೈತರಿಗೆ ಮತ್ತು ಟ್ರೇಡರ್ಸ್‌ಗಳಿಗೆ ಕೇವಲ ಸಾಲದ ನೆರವು ನೀಡುವುದಷ್ಟೇ ಅಲ್ಲದೆ, ರೈತರ ಅಗತ್ಯಕ್ಕೆ ತಕ್ಕಂತೆ ದೈನಂದಿನ ಮತ್ತು ತಾಂತ್ರಿಕ ಮಾಹಿತಿಗಳನ್ನೂ ಒದಗಿಸಲಾಗುವುದು. ಯಾವುದೇ ಜಿಲ್ಲೆ ಅಥವಾ ಹೋಬಳಿಯ ರೈತ ತನ್ನ ಜಮೀನು ಮತ್ತು ತಾನು ಬೆಳೆಯುವ ಬೆಳೆಯ ವಿವರವನ್ನು ದಾಖಲಿಸಿದರೆ ಅಲ್ಲಿ ಮಳೆ ಯಾವಾಗ ಬರುತ್ತದೆ, ಈ ವರ್ಷ ಯಾವ ಬೆಳೆ ಹೇಗೆ ಇಳುವರಿ ಕೊಡಬಹುದು, ಯಾವ ಬೆಳೆಗೆ ಮಾರುಕಟ್ಟೆಯ ದರ ಎಷ್ಟಿರಬಹುದು, ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಬೇಡಿಕೆ ಸೃಷ್ಟಿಸುವಂತ ಧಾನ್ಯ ಅಥವಾ ತೋಟಗಾರಿಕಾ ಬೆಳೆ ಯಾವವು, ಬೆಳೆಗೆ ತಗುಲಬಹುದಾದ ರೋಗದ ಮಾಹಿತಿ ಮತ್ತು ಅದಕ್ಕೆ ಪರಿಹಾರ ಹೀಗೆ ಹತ್ತು ಹಲವು ಪ್ರಯೋಜನಗಳನ್ನು ರೈತರೂ ಪಡೆದುಕೊಳ್ಳಬಹುದು’ ಅಗ್ರಿಫೈ ಸ್ಥಾಪಕ ಅಭಿಲಾಷ್ ತಿರುಪತಿ ಎಂದು ವಿವರಿಸಿದರು.

‘ರೈತ ವ್ಯಾಪಾರಸ್ಥರಿಗೆ ಸಾಲದ ನೆರವು ಒದಗಿಸವಂತಹ ಯೋಜನೆಯನ್ನು ಸದ್ಯ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಪ್ರಾರಂಭಿಸಲಾಗಿದೆ. ಈಗಾಗಲೇ ಕೊಪ್ಪಳ, ಬಳ್ಳಾರಿ, ಗದಗ ಮತ್ತು ಹಾವೇರಿ ಜಿಲ್ಲೆಯಲ್ಲಿ ಕೆಲವರು ಇದರ ಉಪಯೋಗ ಪಡೆದಿದ್ದಾರೆ. ಇಡೀ ದೇಶದಲ್ಲಿ ಒಟ್ಟಾರೆ ಐದು ಮಿಲಿಯನ್ ವ್ಯಾಪಾರಸ್ಥರನ್ನು ಈ ವ್ಯವಸ್ಥೆಯಡಿ ತರುವ ಉದ್ದೇಶ ಹೊಂದಲಾಗಿದೆ’ ಎಂದು ಮತ್ತೋರ್ವ ಸಹ ಸ್ಥಾಪಕ ಮಿತಿಲೇಶ್ ಕುಮಾರ್ ಹೇಳಿದರು.

ಟಾಪ್ ನ್ಯೂಸ್

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.