August 1.75 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ: 10% ಹೆಚ್ಚಳ
Team Udayavani, Sep 2, 2024, 6:41 AM IST
ಹೊಸದಿಲ್ಲಿ: ಆಗಸ್ಟ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹವು ಶೇ.10ರಷ್ಟು ಏರಿಕೆಯಾಗಿದ್ದು, ಒಟ್ಟಾರೆ 1.75 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ ಎಂದು ಸರಕಾರದ ದತ್ತಾಂಶ ತಿಳಿಸಿದೆ.
ಕಳೆದ ವರ್ಷದ ಆಗಸ್ಟ್‌ನಲ್ಲಿ ಜಿಎಸ್‌ಟಿ ಆದಾಯ 1.59 ಲಕ್ಷ ಕೋಟಿ ರೂ. ಆಗಿದ್ದರೆ, ಪ್ರಸಕ್ತ ವರ್ಷದ ಜುಲೈಯಲ್ಲಿ ಇದು 1.82 ಲಕ್ಷ ಕೋಟಿ ರೂ. ಆಗಿತ್ತು. ಈ ವರ್ಷ ಆಗಸ್ಟ್‌ನಲ್ಲಿ ದೇಶೀಯ ಜಿಎಸ್‌ಟಿ ಆದಾಯವು ಶೇ.9.2ರಷ್ಟು ಹೆಚ್ಚಳವಾಗಿ 1.25 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಇನ್ನು ಸರಕುಗಳ ಆಮದಿನಿಂದಾಗಿ ಬಂದ ಒಟ್ಟಾರೆ ಜಿಎಸ್‌ಟಿ ಆದಾಯವು ಶೇ.12.1ರಷ್ಟು ಏರಿಕೆಯಾಗಿ, 49,976 ಕೋಟಿ ರೂ. ಸಂಗ್ರಹವಾಗಿದೆ. 24,460 ಕೋಟಿ ರೂ.ಗಳ ರೀಫಂಡ್ ಆಗಿದೆ ಎಂದೂ ಸರಕಾರ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.