ಕೇಂದ್ರ ಬಜೆಟ್ ದಿನದಂದು ವಹಿವಾಟಿಗೆ ಧಕ್ಕೆ; ಜ.31 ಹಾಗೂ ಫೆ.1ರಂದು ಮತ್ತೆ ಬ್ಯಾಂಕ್ ಮುಷ್ಕರ
ಸರ್ಕಾರದ ಜತೆ ಜ.15ರಂದು ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಮತ್ತೆ ಜನವರಿ 31ರಿಂದ ಎರಡು ದಿನಗಳ ಕಾಲ ಮುಷ್ಕರ
Team Udayavani, Jan 16, 2020, 12:55 PM IST
ನವದೆಹಲಿ:ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಶನ್ (ಐಬಿಎ) ಸರ್ಕಾರದ ಜತೆ ಜ.15ರಂದು ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಮತ್ತೆ ಜನವರಿ 31ರಿಂದ ಎರಡು ದಿನಗಳ ಕಾಲ ದೇಶಾದ್ಯಂತ ಮುಷ್ಕರ ನಡೆಸುವುದಾಗಿ ಬ್ಯಾಂಕ್ ನೌಕರರ ಸಂಘಟನೆ ತಿಳಿಸಿದೆ.
ಒಂಬತ್ತು ಬ್ಯಾಂಕ್ ಕಾರ್ಮಿಕ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ವೇದಿಕೆಯು(ಯುಎಫ್ ಬಿಯು) ಈ ಮುಷ್ಕರಕ್ಕೆ ಕರೆ ನೀಡಿದೆ. ಜನವರಿ ತಿಂಗಳಲ್ಲಿ ನಡೆಯುತ್ತಿರುವ ಬ್ಯಾಂಕ್ ನೌಕರರ ಎರಡನೇ ಮುಷ್ಕರ ಇದಾಗಲಿದೆ. ಈಗಾಗಲೇ ಜನವರಿ 8ರಂದು ಭಾರತ್ ಬಂದ್ ಜತೆಗೆ ಮುಷ್ಕರ ನಡೆಸಿದ್ದವು.
ಬ್ಯಾಂಕ್ ನೌಕರರ ವೇತನ ಪರಿಷ್ಕರಣೆಯು 2017ರಿಂದ ನನೆಗುದಿಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 11, 12 ಮತ್ತು 13ರಂದು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಈ ವರ್ಷವೂ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.
ಜನವರಿ 31ರ ಎರಡು ದಿನಗಳ ಕಾಲ ಮುಷ್ಕರ ನಡೆಸಲಿದ್ದು, ಲೋಕಸಭೆಯ ಬಜೆಟ್ ಅಧಿವೇಶನದ ಮೊದಲ ದಿನವೇ ಮುಷ್ಕರದ ಬಿಸಿ ಬ್ಯಾಂಕ್ ವಹಿವಾಟಿಗೆ ತಟ್ಟಲಿದೆ. ಫೆಬ್ರುವರಿ 1ರಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.