ಮುಂಬಯಿ ಶೇರು ಪೇಟೆಗೆ ಕಾಡಿದ ಟ್ರಂಪ್ ಗ್ರಹಣ: 274 ಅಂಕ ನಷ್ಟ
Team Udayavani, Jan 20, 2017, 4:29 PM IST
ಮುಂಬಯಿ : ಅಮೆರಿಕ ನಿಯೋಜಿತ ಅಧ್ಯಕ್ಷ ಡೊನಲ್ಡ್ ಟ್ರಂಪ್ ಅವರಿಂದು ಅಧ್ಯಕ್ಷ ಪದ ಸ್ವೀಕಾರಾರ್ಥವಾಗಿ ಪ್ರಮಾಣ ವಚನ ಸ್ವೀಕರಿಸಿ ಮಾಡಲಿರುವ ತಮ್ಮ ನೀತಿ – ನಿರ್ಧಾರಗಳನ್ನು ಒಳಗೊಂಡ ಭಾಷಣವನ್ನು ತೀವ್ರ ಕುತೂಹಲ, ಕಾತರ ಹಾಗೂ ಆತಂಕದಿಂದ ಎದುರು ನೋಡುತ್ತಿರುವ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ವಾರಾಂತ್ಯದ ವಹಿವಾಟನ್ನು 274.10 ಅಂಕಗಳ ನಷ್ಟದೊಂದಿಗೆ 27,034.50 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 85.75 ಅಂಕಗಳ ನಷ್ಟದೊಂದಿಗೆ 8,349.35 ಅಂಕಗಳ ಮಟ್ಟದಲ್ಲಿ ವಾರಾಂತ್ಯ ದಿನದ ವಹಿವಾಟನ್ನು ಕೊನೆಗೊಳಿಸಿದೆ.
ಇಂದಿನ ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,874 ಶೇರುಗಳು ಹಿನ್ನಡೆಗೆ ಗುರಿಯಾದವು; ಕೇವಲ 815 ಶೇರುಗಳು ಮುನ್ನಡೆ ಸಾಧಿಸಿದವು. 172 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಸೆನ್ಸೆಕ್ಸ್ ಹಾಗೂ ನಿಫ್ಟಿ ಇಂದು ವಾರದ ಕನಿಷ್ಠ ಮಟ್ಟವನ್ನು ದಾಖಲಿಸಿದವು. ಬಿಎಸ್‌ಇ ಮಿಡ್ ಕ್ಯಾಪ್ ಶೇ.1.25ರ ಕುಸಿತವನ್ನು ಕಂಡರೆ ಬಿಎಸ್‌ಇ ಸ್ಮಾಲ್ ಕ್ಯಾಪ್ ಶೇ.1.01ರ ಕುಸಿತಕ್ಕೆ ಗುರಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಹೊಸ ಸೇರ್ಪಡೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.