ಬಜೆಟ್ ಹ್ಯಾಂಗ್ಓವರ್ ಬಳಿಕ ಮುಂಬಯಿ ಶೇರು ಮತ್ತೆ ಕುಸಿತ
Team Udayavani, Feb 2, 2017, 10:45 AM IST
ಮುಂಬಯಿ : ಬಜೆಟ್ ಪ್ರಸ್ತಾವಗಳ ಬಲದಲ್ಲಿ ನಿನ್ನೆ ಬುಧವಾರ 486 ಅಂಕಗಳ ಭರ್ಜರಿ ಏರಿಕೆಯನ್ನು ದಾಖಲಿಸಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 51 ಅಂಕಗಳ ನಷ್ಟಕ್ಕೆ ಗುರಿಯಾಗಿ ಮುಗ್ಗರಿಸಿದೆ.ಬಜೆಟ್ ಹ್ಯಾಂಗ್ಓವರ್ ಬಳಿಕ ಮುಂಬಯಿ ಶೇರು ಮತ್ತೆ ಕುಸಿತ
ನಿನ್ನೆಯ ಭರ್ಜರಿ ಏರಿಕೆಯ ಫಲವಾಗಿ ಉತ್ತಮ ಮುನ್ನಡೆ ಕಂಡಿದ್ದ ಶೇರುಗಳನ್ನು ಇಂದು ವಹಿವಾಟುದಾರರು ಹಾಗೂ ಹೂಡಿಕೆದಾರರು ಅಲ್ಪ ಲಾಭದ ನಗದೀಕರಣಕ್ಕೆ ಮುಂದಾದದ್ದೇ ಸೆನ್ಸೆಕ್ಸ್ ಮುಗ್ಗರಿಕೆಗೆ ಕಾರಣವಾಯಿತು. ಮೇಲಾಗಿ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಏಶ್ಯನ್ ಶೇರುಪೇಟೆಯಲ್ಲಿ ದೌರ್ಬಲ್ಯ ತೋರಿ ಬಂದದ್ದು ಕೂಡ ಸೆನ್ಸೆಕ್ಸ್ ಮುಗ್ಗರಿಕೆಗೆ ಮುಳುವಾಯಿತು.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 6.50 ಅಂಕಗಳ ನಷ್ಟದೊಂದಿಗೆ 28,135.14 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9.55 ಅಂಕಗಳ ನಷ್ಟದೊಂದಿಗೆ 8,706.85 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಐಟಿಸಿ, ಭಾತಿರ, ಎನ್ಟಿಪಿಸಿ, ಐಸಿಐಸಿಐ ಬ್ಯಾಂಕ್ ಮತ್ತು ಓಎನ್ಜಿಸಿ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು. ಮಹೀಂದ್ರ, ಟಾಟಾ ಮೋಟರ್, ವಿಪ್ರೋ, ಗೇಲ್ ಮತ್ತು ಎಚ್ ಡಿ ಎಫ್ ಸಿ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.