ಉತ್ತಮ ಜಿಡಿಪಿ, ಅಚಲ ವಿಶ್ವಾಸ: ಮುಂಬಯಿ ಶೇರು 241 ಅಂಕ ಜಿಗಿತ

Team Udayavani, Mar 1, 2017, 4:22 PM IST

Sensex-Rally-700.jpg

ಮುಂಬಯಿ : ನೋಟು ನಿಷೇಧದ ಕರಾಳ ಛಾಯೆಯ ಹೊರತಾಗಿಯೂ ಕಳೆದ ಡಿಸೆಂಬರ್‌ ತ್ತೈಮಾಸಿಕದಲ್ಲಿ ಶೇ.7ರ ಉತ್ತಮ ಜಿಡಿಪಿ ದಾಖಲಾಗಿದ್ದು ಭಾರತವು ವಿಶ್ವದಲ್ಲಿ ಈಗಲೂ ಅತ್ಯಂತ ಕ್ಷಿಪ್ರಗತಿಯಲ್ಲಿ ಉದಯಿಸುತ್ತಿರುವ ಬಲಿಷ್ಠ ಆರ್ಥಿಕ ಶಕ್ತಿ ಎಂಬ ಹೆಗ್ಗಳಿಕೆಯನ್ನು ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು 241.17 ಅಂಕಗಳ ಉತ್ತಮ ಏರಿಕೆಯೊಂದಿಗೆ 28,984.49 ಅಂಕಗಳ ಮಟ್ಟದಲ್ಲಿ ಬುಧವಾರದ ವಹಿವಾಟನ್ನು ಆಶಾದಾಯಕವಾಗಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 66.20 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 8,945.80 ಅಂಕಗಳ ಮಟ್ಟದಲ್ಲಿ ಮುಗಿಸಿತು. 

ಮುಂಬಯಿ ಶೇರು ಪೇಟೆಯ ಇಂದಿನ ರಾಲಿಗೆ HDFC ಮತ್ತು ITC ಗಣನೀಯ ಕೊಡುಗೆ ನೀಡಿದವು. ಲೋಹದ ಶೇರುಗಳು ಇಂದು ಹೊಳೆದು ವಿಜೃಂಭಿಸಿದವು.

ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್‌, ಮಹೀಂದ್ರ, ಸನ್‌ ಫಾರ್ಮಾ, ಡಾ. ರೆಡ್ಡಿ, ಐಟಿಸಿ, ಹಿಂಡಾಲ್ಕೊ ಮತ್ತು ಕೋಟಕ್‌ ಮಹೀಂದ್ರ ಬ್ಯಾಂಕ್‌ ಶೇರುಗಳು ಶೇ.2 ರಿಂದ ಶೇ.3.6ರ ಏರಿಕೆಯನ್ನು ದಾಖಲಿಸಿದವು. 

ಇದೇ ವೇಳೆ ಎನ್‌ಟಿಪಿಸಿ, ಟಾಟಾ ಮೋಟರ್‌, ಗೇಲ್‌, ಬಿಎಚ್‌ಇಎಲ್‌, ಭಾರ್ತಿ ಏರ್‌ಟೆಲ್‌, ಐಡಿಯಾ ಸೆಲ್ಯುಲರ್‌ ಮತ್ತು ಈಶರ್‌ ಮೋಟರ್‌ ಒತ್ತಡಕ್ಕೆ ಗುರಿಯಾದವು. 

ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,630 ಶೇರುಗಳು ಮುನ್ನಡೆ ಸಾಧಿಸಿದವು; 1,220 ಶೇರುಗಳು ಹಿನ್ನಡೆಗೆ ಗುರಿಯಾದವು. 

ಈ ವರ್ಷಾಂತ್ಯದ ವೇಳೆಗೆ ಭಾರತೀಯ ಶೇರುಗಳು ಬಹುವಾಗಿ ವಿಜೃಂಭಿಸುವ ವಿಶ್ವಾಸವನ್ನು ಗಮನಾರ್ಹ ಸಂಖ್ಯೆಯ ಮಾರುಕಟ್ಟೆ ವಿಶ್ಲೇಷಕರು ವ್ಯಕ್ತಪಡಿಸಿದ್ದಾರೆ. ಅಂತೆಯೇ ವಿಶ್ವ ಹೂಡಿಕೆದಾರರು ಈಗ ಮತ್ತೆ ಭಾರತದತ್ತ ಮುಖ ಮಾಡುತ್ತಿದ್ದಾರೆ ಎನ್ನಲಾಗಿದೆ. 

ಟಾಪ್ ನ್ಯೂಸ್

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.