ಏಶ್ಯನ್ ಪೇಟೆಯ ಸ್ಥಿರತೆ : ಮುಂಬಯಿ ಶೇರು 47 ಅಂಕಗಳ ಏರಿಕೆ
Team Udayavani, Jan 3, 2017, 3:55 PM IST
ಮುಂಬಯಿ : ಏಶ್ಯನ್ ಶೇರುಪೇಟೆಗಳಲ್ಲಿನ ಸ್ಥಿರತೆಯ ಪ್ರವೃತ್ತಿಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ವಹಿವಾಟನ್ನು 47.79 ಅಂಕಗಳ ಏರಿಕೆಯೊಂದಿಗೆ 26,643.24 ಅಂಕಗಳ ಮಟ್ಟವನ್ನು ತಲುಪಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 12.75 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 8,192.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಕೋಲ್ ಇಂಡಿಯಾ, ಬಿಎಚ್ಇಎಲ್, ಎಕ್ಸಿಸ್ ಬ್ಯಾಂಕ್, ಗೇಲ್ ಮತ್ತು ಐಸಿಐಸಿಐ ಬ್ಯಾಂಕ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು. ಭಾರ್ತಿ ಏರ್ಟೆಲ್, ಹೀರೋ ಮೋಟೋ ಕಾರ್ಪ್, ಟಾಟಾ ಮೋಟರ್, ಟಾಟಾ ಸ್ಟೀಲ್ ಮತ್ತು ವಿಪ್ರೋ ಟಾಪ್ ಲೂಸರ್ ಎನಿಸಿಕೊಂಡವು.
ಇಂದು ವ್ಯವಹಾರಕ್ಕೆ ಒಳಪಟ್ಟ ಒಟ್ಟು ಶೇರುಗಳ ಪೈಕಿ 1,800 ಶೇರುಗಳು ಮುನ್ನಡೆ ಸಾಧಿಸಿದವು. 953 ಶೇರುಗಳು ಹಿನ್ನಡೆಗೆ ಗುರಿಯಾದವು. 689 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.