ಚುನಾವಣಾ ಫಲಿತಾಂಶದತ್ತ ಚಿತ್ತ : ಮುಂಬಯಿ ಶೇರು 215 ಅಂಕ ಏರಿಕೆ
Team Udayavani, Mar 6, 2017, 4:44 PM IST
ಮುಂಬಯಿ : ಮುಂಚೂಣಿ ಶೇರುಗಳು ಮುಂಬಯಿ ಶೇರು ಮಾರುಕಟ್ಟೆಗೆ ಬಲವಾದ ಆಧಾರ ಸ್ತಂಭಗಳಂತೆ ನಿಂತ ಪರಿಣಾಮವಾಗಿ ಇಂದು ಸೋಮವಾರದ ವಹಿವಾಟನ್ನು ಸೆನ್ಸೆಕ್ಸ್ 215.74 ಅಂಕಗಳ ಏರಿಕೆಯೊಂದಿಗೆ 29,048.19 ಅಂಗಳ ಮಟ್ಟದಲ್ಲಿ ಹೊಸ ವಿಶ್ವಾಸ ಮತ್ತು ಹುಮ್ಮಸ್ಸಿನೊಂದಿಗೆ ಕೊನೆಗೊಳಿಸುವಲ್ಲಿ ಸಫಲವಾಗಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 65.90 ಅಂಕಗಳ ಏರಿಕೆಯನ್ನು ದಾಖಲಿಸಿದ ದಿನದ ವಹಿವಾಟನ್ನು 8,963.45 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ 1,503 ಶೇರುಗಳು ಮುನ್ನಡೆ ಸಾಧಿಸಿದರೆ 1,414 ಶೇರುಗಳು ಹಿನ್ನಡೆಗೆ ಗುರಿಯಾದವು. 176 ಶೇರುಗಳು ಇದ್ದಲ್ಲೇ ಉಳಿದವು.
ಇಂದಿನ ವಹಿವಾಟಿನಲ್ಲಿ ಐಟಿ ರಂಗದ ಶೇರುಗಳು ಹಿಂದೆ ಬಿದ್ದವು. ಎಚ್1ಬಿ ವೀಸಾ ತೊಡಕಿನಿಂದಾಗಿ ಐಟಿ ಶೇರುಗಳು ಒತ್ತಡಕ್ಕೆ ಗುರಿಯಾದವು.
ಇಂದಿನ ಟಾಪ್ ಗೇನರ್‌ಗಳು : ರಿಲಯನ್ಸ್, ಟಾಟಾ ಮೋಟರ್, ಅದಾನಿ ಪೋರ್ಟ್, ಎಸ್ ಬ್ಯಾಂಕ್, ಬಿಎಚ್‌ಇಎಲ್.
ಟಾಪ್ ಲೂಸರ್‌ಗಳು : ಗ್ರಾಸಿಂ, ಅರಬಿಂದೋ ಫಾರ್ಮಾ, ಟಿಸಿಎಸ್, ಟೆಕ್ ಮಹೀಂದ್ರ, ಐಡಿಯಾ ಸೆಲ್ಯುಲರ್
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇನ್ನು ಕೆಲವೇ ದಿನಗಳಲ್ಲಿ ಹೊರಬೀಳಲಿದ್ದು ಉತ್ತರ ಪ್ರದೇಶದಲ್ಲಿ ಬಿಜೆಪಿಯು ಬಹುಮತ ಗಳಿಸಿದಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಹೊಸ ಎತ್ತರವನ್ನು ಏರುವುದು ನಿಶ್ಚಿತ ಎಂಬ ಆಶಾವಾದವನ್ನು ಶೇರು ತಜ್ಞ ಉದಯನ್ ಮುಖರ್ಜಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
MUST WATCH
ಹೊಸ ಸೇರ್ಪಡೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.