2 ತಿಂಗಳ ಗರಿಷ್ಠ ಮಟ್ಟಕ್ಕೆ ಜಗಿದ ಮುಂಬಯಿ ಶೇರು; 240 ಅಂಕ ಏರಿಕೆ
Team Udayavani, Jan 11, 2017, 4:34 PM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿನ ತೇಜಿ ಹಾಗೂ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಗೊಳ್ಳುವರೆಂಬ ಕೆಲವೊಂದು ನಿರ್ಣಾಯಕ ಆರ್ಥಿಕ ಉಪಕ್ರಮಗಳ ಹಿನ್ನೆಲೆಯಲ್ಲಿ ಭಾರೀ ಜಿಗಿತಕ್ಕೆ ಮುಂದಾದ ಮುಂಬಯಿ ಶೇರು ಪೇಟೆ ಇಂದು ಬುಧವಾರದ ವಹಿವಾಟನ್ನು ಎರಡು ತಿಂಗಳ ಗರಿಷ್ಠ ಮಟ್ಟವಾಗಿ 240.85 ಅಂಕಗಳ ಏರಿಕೆಯೊಂದಿಗೆ 27,140.41 ಅಂಕಗಳ ಮಟ್ಟಕ್ಕೇರುವ ಸಾಧನೆಯನ್ನು ತೋರಿದೆ.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 92.05 ಅಂಕಗಳ ಏರಿಕೆಯನ್ನು ದಾಖಲಿಸಿ 8,380.65 ಅಂಕಗಳ ಮಟ್ಟವನ್ನು ತಲುಪಿದೆ.
ಇಂದಿನ ವಹಿವಾಟಿನಲ್ಲಿ ಇಂಡಸ್ ಇಂಡ್ ಬ್ಯಾಂಕ್ ಶೇ.5.5, ಸೌತ್ ಇಂಡಿಯನ್ ಬ್ಯಾಂಕ್ ಶೇ.2ರಷ್ಟು ಏರಿದವು. ಉಳಿದಂತೆ ಎಚ್ ಡಿ ಎಫ್ ಸಿ ಬ್ಯಾಂಕ್, ಎಚ್ ಡಿ ಎಫ್ ಸಿ ಲಿಮಿಟೆಡ್, ಐಸಿಐಸಿಐ ಬ್ಯಾಂಕ್ ಮತ್ತು ಎಸ್ಬಿಐ ಶೇ.1ರಿಂದ ಶೇ.2ರಷ್ಟು ಏರಿದವು. ನಿಫ್ಟಿ ಬ್ಯಾಂಕ್ ಸೂಚ್ಯಂಕ ಕಳೆದ ಒಂದು ತಿಂಗಳಲ್ಲೇ ಗರಿಷ್ಠ ಮಟ್ಟದ ಶೇ.1.58ರ ಏರಿಕೆಯನ್ನು ದಾಖಲಿಸಿತು.
ಉತ್ತಮ ಮುನ್ನಡೆ ಕಂಡ ಇತರ ಶೇರುಗಳೆಂದರೆ ಹಿಂಡಾಲ್ಕೊ ಶೇ.6.1, ಕೋಲ್ ಇಂಡಿಯಾ ಶೇ.5.3 ಮತ್ತು ಟಾಟಾ ಸ್ಟೀಲ್ ಶೇ.4.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.