ರೂಪಾಯಿ ಕುಸಿತ, ಲಾಭಗನಗದೀಕರಣ: ಸೆನ್ಸೆಕ್ಸ್ 467 ಅಂಕಗಳ ಭಾರೀ ನಷ್ಟ
Team Udayavani, Sep 17, 2018, 11:24 AM IST
ಮುಂಬಯಿ : ಡಾಲರ್ ಎದುರು ಕುಸಿದು ಮತ್ತೆ 72 ರೂ. ಗಡಿ ದಾಟಿದ ರೂಪಾಯಿ, ವಹಿವಾಟುದಾರರಿಂದ ಲಾಭ ನಗದೀಕರಣ, ಜಾಗತಿಕ ಶೇರು ಪೇಟೆಗಳಲ್ಲಿನ ದೌರ್ಬಲ್ಯ ಇವೇ ಮುಂತಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 350ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಎಕ್ಸಿಸ್ ಬ್ಯಾಂಕ್, ಎಸ್ಬಿಐ, ಏಶ್ಯನ್ ಪೇಂಟ್, ಟಾಟಾ ಮೋಟರ್, ಎಚ್ ಡಿ ಎಫ್ ಸಿ ಮತ್ತು ಎಚ್ ಡಿ ಎಫ್ ಸಿ ಬ್ಯಾಂಕ್ ಶೇರುಗಳು ತೀವ್ರ ಕುಸಿತಕ್ಕೆ ಗುರಿಯಾದವು.
ಕಳೆದ ಎರಡು ದಿನಗಳ ವಹಿವಾಟನಲ್ಲಿ 677.51 ಅಂಕಗಳ ಭರ್ಜರಿ ಮುನ್ನಡೆ ಕಂಡಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬೆಳಗ್ಗೆ 11.20ರ ಸುಮಾರಿಗೆ 467.65 ಅಂಕಗಳ ನಷ್ಟಕ್ಕೆ ಗುರಿಯಾಗಿ 37,622.99 ಅಂಕಗಳ ಮಟ್ಟದಲ್ಲೂ , ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 134.30 ಅಂಕಗಳ ನಷ್ಟದೊಂದಿಗೆ 11,380.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 81 ಪೈಸೆಯ ಕುಸಿತವನ್ನು ಕಂಡ 72.65 ರೂ. ಮಟ್ಟಕ್ಕೆ ಕುಸಿದದ್ದು ಶೇರು ಮಾರುಕಟ್ಟೆಗೆ ನಿರಾಶೆ ತಂದಿತು.
ಏಶ್ಯನ್ ಶೇರು ಮಾರುಕಟ್ಟೆಗಳ ಪೈಕಿ ಹಾಂಕಾಂಗ್ನ ಹ್ಯಾಂಗ್ ಸೆಂಗ್ ಶೇ. 1.87, ಶಾಂಘೈ ಕಾಂಪೋಸಿಟ್ ಇಂಡೆಕ್ಸ್ ಶೇ.1.06ರ ಕುಸಿತಕ್ಕೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.