ಮುಂಬಯಿ ಶೇರು 150 ಅಂಕ ಕುಸಿತ, ನಿಫ್ಟಿ 10,400ರ ಕೆಳಮಟ್ಟಕ್ಕೆ
Team Udayavani, Mar 14, 2018, 10:55 AM IST
ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ದೌರ್ಬಲ್ಯ ತೋರಿ ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 150 ಅಂಕಗಳ ನಷ್ಟಕ್ಕೆ ಗುರಿಯಾಯಿತು. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,400 ಅಂಕಗಳಿಗಿಂತ ಕೆಳಮಟ್ಟಕ್ಕೆ ಜಾರಿತು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತಮ್ಮ ವಿದೇಶ ಸಚಿವ ರೆಕ್ಸ್ ಟಿಲರ್ಸನ್ ಅವರನ್ನು ವಜಾ ಮಾಡಿ ಅವರ ಹುದ್ದೆಗೆ ಸಿಐಎ ನಿರ್ದೇಶಕ ಮೈಕ್ ಪಾಂಪಿಯೋ ಅವರನ್ನು ನೇಮಿಸಿದ ಅನಿರೀಕ್ಷಿಸಿದ ವಿದ್ಯಮಾನಕ್ಕೆ ಅಮೆರಿಕನ್ ಶೇರು ಮಾರುಕಟ್ಟೆ ಕುಸಿತ ಕಂಡಿರುವುದನ್ನು ಅನುಸರಿಸಿ ಇಂದು ಏಶ್ಯನ್ ಶೇರು ಮಾರುಕಟ್ಟೆಗಳು ಕೂಡ ಕುಸಿತಕ್ಕೆ ಗುರಿಯಾದವು.
ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್ 128.33 ಅಂಕಗಳ ನಷ್ಟದೊಂದಿಗೆ 33,728.45 ಅಂಕಗಳ ಮಟ್ಟದಲ್ಲೂ, ನಿಫ್ಟಿ 39.20 ಅಂಕಗಳ ನಷ್ಟದೊಂದಿಗೆ 10,387.70 ಅಂಕಗಳ ಮಟ್ಟದಲ್ಲೂ ವ್ಯವಹಾರನಿರತವಾಗಿದ್ದವು.
ಟಿಸಿಎಸ್, ಎಸ್ಬಿಐ, ಟಾಟಾ ಸ್ಟೀಲ್, ವೇದಾಂತ, ಮಾರುತಿ ಸುಜುಕಿ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟೆಕ್ ಮಹೀಂದ್ರ, ಅಲ್ಟ್ರಾ ಟೆಕ್ ಸಿಮೆಂಟ್, ಅಂಬುಜಾ ಸಿಮೆಂಟ್, ಗೇಲ್ ಮತ್ತು ಎಚ್ ಸಿ ಎಲ್ ಟೆಕ್ ಶೇರುಗಳು ಟಾಪ್ ಗೇನರ್ ಎನಿಸಿದ್ದವು.
ಭಾರ್ತಿ ಇನ್ಫ್ರಾಟೆಲ್, ಭಾರ್ತಿ ಏರ್ಟೆಲ್, ಅದಾನಿ ಪೋರ್ಟ್, ಎಸ್ಬಿಐ, ಬಿಪಿಸಿಎಲ್ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.
ಡಾಲರ್ ಎದುರು ರೂಪಾಯಿ ವಿನಿಮಯ ದರ ಇಂದು ಬೆಳಗ್ಗಿನ ವಹಿವಾಟಿನಲ್ಲಿ 2 ಪೈಸೆಯಷ್ಟು ಚೇತರಿಸಿಕೊಂಡು 64.87 ರೂ. ಮಟ್ಟದಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.