ಬ್ಯಾಂಕಿಂಗ್, ಫಾರ್ಮಾ ಶೇರು ಮಾರಾಟ : ಸೆನ್ಸೆಕ್ಸ್ 218 ಅಂಕ ಡೌನ್
Team Udayavani, Jul 16, 2018, 4:05 PM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದ ದುರ್ಬಲ ಪ್ರವೃತ್ತಿ, ನಿರಂತರ ವಿದೇಶಿ ಬಂಡವಾಳದ ಹೊರ ಹರಿವಿನ ನಡುವೆ ಬ್ಯಾಂಕಿಂಗ್, ಫಾರ್ಮಾ ಮತ್ತು ಮೆಟಲ್ ರಂಗದ ಶೇರುಗಳ ಭರಾಟೆಯ ಮಾರಾಟದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಮಹಿವಾಟನ್ನು 218 ಅಂಕಗಳ ನಷ್ಟದೊಂದಿಗೆ 36,323.77 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 82.05 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,936.85 ಅಂಕಗಳ ಮಟ್ಟಕ್ಕಿಳಿದು ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಸೆನ್ಸೆಕ್ಸ್ ಕಳೆದ ಶುಕ್ರವಾರದ ವಹಿವಾಟಿನ ನಡುವೆ 36,740.07 ಅಂಕಗಳ ಸಾರ್ವಕಾಲಿಕ ಎತ್ತರವನ್ನು ಕಂಡಿತ್ತಾದರೂ ದಿನದ ವಹಿವಾಟನ್ನು 6.78 ಅಂಕಗಳ ನಷ್ಟದೊಂದಿಗೆ ಕೊನೆಗೊಳಿಸಿತ್ತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,777 ಶೇರುಗಳು ವಹಿವಾಟಿಗೆ ಒಳಪಟ್ಟವು; 548 ಶೇರುಗಳು ಮುನ್ನಡೆ ಸಾಧಿಸಿದವು; 2,051 ಶೇರುಗಳು ಹಿನ್ನಡೆಗೆ ಗುರಿಯಾದವು; 178 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.