ನಿರಂತರ ನಾಲ್ಕನೇ ದಿನ ಕುಸಿತ: ಮುಂಬಯಿ ಶೇರು 300 ಅಂಕ ನಷ್ಟ
Team Udayavani, Mar 5, 2018, 4:48 PM IST
ಮುಂಬಯಿ : ನಿರಂತರ ನಾಲ್ಕನೇ ದಿನ ಕುಸಿತವನ್ನು ಕಂಡಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 300.16 ಅಂಕಗಳ ನಷ್ಟದೊಂದಿಗೆ 33,746.78 ಅಂಕಗಳ ಮಟ್ಟದಲ್ಲಿ, ಎರಡು ವಾರಗಳ ಕನಿಷ್ಠ ಮಟ್ಟವಾಗಿ, ನಿರಾಶಾದಾಯಕವಾಗಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 99.50 ಅಂಕಗಳ ನಷ್ಟದೊಂದಿಗೆ 10,358.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿದೆ. ಕಳೆದ 3 ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 398.81 ಅಂಕಗಳ ನಷ್ಟವನ್ನು ಅನುಭವಿಸಿದೆ.
ಸೆನ್ಸೆಕ್ಸ್ ಕಳೆದ ಫೆ.20ರಂದು 33,703.59 ಅಂಕಗಳ ಕನಿಷ್ಠ ಮಟ್ಟವನ್ನು ಕಂಡಿತ್ತು. ಆ ಬಳಿಕದ ಕನಿಷ್ಠ ಮಟ್ಟ ಇಂದಿನದ್ದಾಗಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಮದು ಸುಂಕ ಹೇರುವ ಪ್ರಸ್ತಾವದ ಬಗ್ಗೆ ಆಡಿರುವ ಮಾತುಗಳು ಜಾಗತಿಕ ವಾಣಿಜ್ಯ ಸಮರಕ್ಕೆ ಹೇತುವಾಗಬಹುದೆಂಬ ಭೀತಿಯಲ್ಲಿ ಮುಂಬಯಿ ಸಹಿತ ಏಶ್ಯನ್ ಶೇರುಪೇಟೆಗಳು ನಲುಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…
Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್ಪಾಸ್
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.