7 ತಿಂಗಳ ಹೊಸ ಕನಿಷ್ಠ ಮಟ್ಟಕ್ಕೆ ಕುಸಿದ ಸೆನ್ಸೆಕ್ಸ್ : 341 ಅಂಕ ನಷ್ಟ
Team Udayavani, Oct 26, 2018, 4:27 PM IST
ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು ಹೊಸ ಏಳು ತಿಂಗಳ ಕನಿಷ್ಠ ಮಟ್ಟವಾಗಿ, 341ಅಂಕಗಳ ನಷ್ಟದೊಂದಿಗೆ 33,349.31 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. ಸೆನ್ಸೆಕ್ಸ್ ನ ಇಂದಿನ ಈ ಮಟ್ಟವು ಈ ವರ್ಷ ಎಪ್ರಿಲ್ 5ರ ಬಳಿಕದಲ್ಲಿ ದಾಖಲಾಗಿರುವ ಕನಿಷ್ಠ ಮಟ್ಟವಾಗಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 94.90 ಅಂಕಗಳ ನಷ್ಟದೊಂದಿಗೆ 10,030 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು. ನಿಫ್ಟಿ ಯ ಈ ಮಟ್ಟ ಈ ವರ್ಷ ಮಾರ್ಚ್ 26ರ ಬಳಿಕ (10,130.65) ದಾಖಲಾಗಿರುವ ಕನಿಷ್ಠ ಮಟ್ಟವಾಗಿದೆ.
ಜಾಗತಿಕ ಶೇರು ಪೇಟೆಗಳಲ್ಲಿನ ಹಿನ್ನಡೆ, ಡಾಲರ್ ಎದುರು ರೂಪಾಯಿ ಕುಸಿತ, ವಿದೇಶಿ ಬಂಡವಾಳದ ನಿರಂತರ ಹೊರ ಹರಿವು – ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆ ಇಂದು ಕುಸಿತಕ್ಕೆ ಗುರಿಯಾಯಿತು.
ವಾರದ ನೆಲೆಯಲ್ಲಿ ಹೇಳುವುದಾದರೆ ಸೆನ್ಸೆಕ್ಸ್ ಮತ್ತು ನಿಫ್ಟಿ ನಿರಂತರ ಎರಡನೇ ವಾರಾಂತ್ಯದ ನಷ್ಟವನ್ನು ದಾಖಲಿಸಿವೆ; ಸೆನ್ಸೆಕ್ಸ್ ಈ ವಾರ 966.32 ಅಂಕಗಳ ನಷ್ಟಕ್ಕೆ ಗುರಿಯಾಗಿದೆ (ಶೇ.3); ನಿಫ್ಟಿ ವಾರದ ನಷ್ಟಕ 273.55 ಅಥವಾ ಶೇ.2.7.
ಡಾಲರ್ ಎದುರು ರೂಪಾಯಿ ಇಂದು ವಹಿವಾಟಿನ ನಡುವೆ 73.45 ರೂ. ಮಟ್ಟಕ್ಕೆ ಕುಸಿಯಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,702 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,105 ಶೇರುಗಳು ಮುನ್ನಡೆ ಸಾಧಿಸಿದವು; 1,448 ಶೇರುಗಳು ಹಿನ್ನಡೆಗೆ ಗುರಿಯಾದವು; 149 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.