ಬೆಳಗ್ಗೆ ಜಿಗಿತ, ಸಂಜೆ ಪ್ರಪಾತ: ಮುಂಬಯಿ ಶೇರು 170 ಅಂಕ ನಷ್ಟ
Team Udayavani, Jan 25, 2019, 11:36 AM IST
ಮುಂಬಯಿ : ಬೆಳಗ್ಗಿನ ವಹಿವಾಟಿನಲ್ಲಿ 250ಕ್ಕೂ ಅಧಿಕ ಅಂಕಗಳ ಜಿಗಿತ ಸಾಧಿಸಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 169.56 ಅಂಕಗಳ ನಷ್ಟದೊಂದಿಗೆ 36,025.54 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿ ನಿರಾಶೆ ಉಂಟು ಮಾಡಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 69.25 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,931.70 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಈ ವಾರ ಸೆನ್ಸೆಕ್ಸ್ ನಷ್ಟ 316 ಅಂಕ; ನಿಫ್ಟಿ ನಷ್ಟ 126 ಅಂಕ.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,704 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 698 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,854 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 152 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
UPI: ದೇಶದಲ್ಲಿ ಯುಪಿಐ ವಿಕ್ರಮ ಅಕ್ಟೋಬರ್ನಲ್ಲಿ ದಾಖಲೆ
Google;ಗೂಗಲ್ ಮ್ಯಾಪ್ ಜತೆ ಮಾತಾಡುತ್ತಾ ಡ್ರೈವ್ ಮಾಡಬಹುದು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.