ರೂಪಾಯಿ ಬಲವರ್ಧನೆ; ಮುಂಬಯಿ ಶೇರು 112 ಅಂಕ ಏರಿಕೆ
Team Udayavani, Nov 22, 2017, 11:05 AM IST
ಮುಂಬಯಿ : ಡಾಲರ್ ಎದುರು ರೂಪಾಯಿ ವಿನಿಮಯ ದರ 14 ಪೈಸೆ ಸುಧಾರಿಸಿರುವುದನ್ನು ಅನುಸರಿಸಿ ಹೂಡಿಕೆದಾರರು ಮತ್ತು ವಹಿವಾಟುದಾರರು ಮುಂಚೂಣಿ ಶೇರುಗಳ ಭರಾಟೆಯ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆ ಇಂದು ಬುಧವಾರದ ವಹಿವಾಟನ್ನು 112 ಅಂಕಗಳ ಉತ್ತಮ ಏರಿಕೆಯೊಂದಿಗೆ ಆರಂಭಿಸಿತು.
ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಉತ್ತಮ ತೇಜಿ ಕಂಡುಬಂದಿರುವುದು ಮತ್ತು ನಿನ್ನೆಯ ವಹಿವಾಟನ್ನು ಅಮೆರಕದ ವಾಲ್ ಸ್ಟ್ರೀಟ್ ಮೇಲ್ಮಟ್ಟದಲ್ಲಿ ಕೊನೆಗೊಳಿಸಿರುವುದು ಇಂದು ಮುಂಬಯಿ ಶೇರು ಪೇಟೆಗೆ ಹೊಸ ಉತ್ಸಾಹವನ್ನು ತುಂಬಿತು.
ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟಾರೆಯಾಗಿ 717.91 ಅಂಕ ಸಂಪಾದಿಸಿದ್ದು ಮುಂಬಯಿ ಶೇರು ಪೇಟೆಯಲ್ಲೀಗ ಗೂಳಿಗಳ ಸಂಭ್ರಮವೇ ಎದ್ದು ಕಾಣುವಂತಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.
ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 50.66 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,529.01 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರುಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 3.10 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,330.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.