150ಕ್ಕೂ ಅಧಿಕ ಅಂಕಗಳ ಮುನ್ನಡೆ ಪಡೆದ ಮುಂಬಯಿ ಶೇರು
Team Udayavani, Nov 30, 2018, 10:42 AM IST
ಮುಂಬಯಿ : ಎರಡು ದಿನಗಳ ಜಿ20 ಶೃಂಗ ನಡೆಯುವ ಮುನ್ನವೇ ಏಶ್ಯನ್ ಶೇರು ಪೇಟೆಗಳು ಇಂದು ಶುಕ್ರವಾರ ಧನಾತ್ಮಕತೆಯನ್ನು ತೋರಿರುವ ಹಿನ್ನೆಯಲೆಯಲ್ಲಿ ಮುಂಬಯಿ ಶೇರು ಪೇಟೆ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 150ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿತು.
ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಡಿಸೆಂಬರ್ ವಾಯಿದೆ ವಹಿವಾಟು ಸರಣಿಯನ್ನು ಭರ್ಜರಿಯಾಗಿ ಆರಂಭಿಸಿದ್ದು 10,900 ಅಂಕಗಳನ್ನು ದಾಟುವ ಸಾಧನೆಯನ್ನು ದಾಖಲಿಸಿತು.
ಡಾಲರ್ ಎದುರು ರೂಪಾಯಿ ಇಂದು ಬೆಳಗ್ಗಿನ ವಹಿವಾಟಿನಲ್ಲಿ 21 ಪೈಸೆಗಳ ಏರಿಕೆಯನ್ನು ದಾಖಲಿಸಿ ಕಳೆದ ಮೂರು ತಿಂಗಳ ಎತ್ತರದ ಮಟ್ಟವಾಗಿ 69.64 ರೂ. ಗೆ ತಲುಪುವ ಮೂಲಕ ಶೇರು ಪೇಟೆಗೆ ಉತ್ಸಾಹ ತುಂಬಿತು.
ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್ 140.21 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,310.62 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 34.70 ಅಂಕಗಳ ಏರಿಕೆಯನ್ನು ದಾಖಲಿಸಿ 10,893.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ರಿಲಯನ್ಸ್, ಬಜಾಜ್ ಫಿನಾನ್ಸ್, ಎಚ್ ಡಿ ಎಫ್ ಸಿ ಬ್ಯಾಂಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್ಗಳು : ಎಸ್ ಬ್ಯಾಂಕ್, ಮಹೀಂದ್ರ, ಝೀ ಎಂಟರ್ಟೇನ್ಮೆಂಟ್, ವಿಪ್ರೋ, ಇಂಡಿಯಾಬುಲ್ಸ್ ಹೌಸಿಂಗ್; ಟಾಪ್ ಲೂಸರ್ಗಳು : ಭಾರ್ತಿ ಇನ್ಫ್ರಾಟೆಲ್, ಟಾಟಾ ಮೋಟರ್, ಎನ್ ಟಿ ಪಿ ಸಿ, ವೇದಾಂತ ಮತ್ತು ಹಿಂಡಾಲ್ಕೊ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.