ಜಾಗತಿಕ ಶೇರು ಪೇಟೆಗಳಲ್ಲಿ ತೇಜಿ : ಸೆನ್ಸೆಕ್ಸ್ 268 ಅಂಕ ಜಂಪ್
Team Udayavani, Jan 31, 2019, 5:20 AM IST
ಮುಂಬಯಿ : ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ತನ್ನ ಬಡ್ಡಿ ದರವನ್ನು ಯಥಾವತ್ ಉಳಿಸಿಕೊಂಡದ್ದನ್ನು ಅನುಸರಿಸಿ ಜಾಗತಿಕ ಶೇರುಪೇಟೆಗಳಲ್ಲಿ ಧನಾತ್ಮಕತೆ ಕಂಡು ಬಂದಿದ್ದು ಮುಂಬಯಿ ಶೇರು ಪೇಟೆಯಲ್ಲಿ ಕೂಡ ತೇಜಿ ಕಾಣಿಸಿಕೊಂಡಿರುವ ಪರಿಣಾಮ ಸೆನ್ಸೆಕ್ಸ್ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಜಿಗತವನ್ನು ಸಾಧಿಸಿತು.
ನಿನ್ನೆ ಬುಧವಾರದ ವಹಿವಾಟಿನಲ್ಲಿ ಅಲ್ಪ ಏರಿಕೆಯನ್ನು ದಾಖಲಿಸಿದ್ದ ಸೆನ್ಸೆಕ್ಸ್ ಇಂದು ಬೆಳಗ್ಗೆ 10.45ರ ಸುಮಾರಿಗೆ 268.13 ಅಂಕಗಳ ಏರಿಕೆಯನ್ನು ದಾಖಲಿಸಿ 35,859.38 ಅಂಕಗಳ ಮಟ್ಟದಲ್ಲೂ , ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 61.90 ಅಂಕಗಳ ಏರಿಕೆಯೊಂದಿಗೆ 10,713.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಐಸಿಐಸಿಐ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಎಸ್ ಬ್ಯಾಂಕ್, ಎಚ್ ಡಿ ಎಫ್ ಸಿ, ಇನ್ಫೋಸಿಸ್ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಸಕ್ರಿಯವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 26 ಪೈಸೆಗಳ ಜಿಗಿತವನ್ನು ಸಾಧಿಸಿ 70.86 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.