ಮುಂಬಯಿ ಶೇರು: ಹೊಸ ಎತ್ತರದ ದಾಖಲೆ; 133 ಅಂಕ ಏರಿಕೆ
Team Udayavani, May 15, 2017, 4:44 PM IST
ಮುಂಬಯಿ: ಉತ್ತಮ ಆರ್ಥಿಕಾಭಿವೃದ್ಧಿ ಅಂಕಿ ಅಂಶಗಳು, ಆರ್ಬಿಐ ಬಡ್ಡಿ ದರ ಕಡಿತಕ್ಕೆ ಅನುಕೂಲಕರ ವಾತಾವರಣ ಮತ್ತು ಉತ್ತಮ ಮುಂಗಾರು ಮಳೆಯ ನಿರೀಕ್ಷೆ – ಹೀಗೆ ಹಲವಾರು ಉತ್ತಮ ಕಾರಣಗಳ ಬಲದಲ್ಲಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 133.97 ಅಂಕಗಳ ಏರಿಕೆಯೊಂದಿಗೆ 30,322.12 ಅಂಕಗಳ ದಾಖಲೆಯ ಮಟ್ಟದಲ್ಲಿ ಕೊನೆಗೊಳಿಸಿತು. ಆ ಮೂಲಕ ಹೊಸ ಕ್ಲೋಸಿಂಗ್ ಹೈ ದಾಖಲಿಸಿತು.
ಇದೇ ರೀತಿ ರಾಷ್ಟ್ರೀಯ ಶೇರ ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 44.50 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 9,445.40 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಪೇಟೆ ಸೂಚ್ಯಂಕ ಏರಿಕೆಗೆ ಇಂದು ಬ್ಯಾಂಕ್, ಎಫ್ಎಂಸಿಜಿ, ಮೆಟಲ್ ಮತ್ತು ಫಾರ್ಮಾ ಶೇರುಗಳು ಮುಖ್ಯವಾಗಿ ಕಾರಣವಾದವು. ಟಾಟಾ ಸ್ಟೀಲ್, ಹಿಂಡಾಲ್ಕೊ ಶೇರುಗಳು ಶೇ.4ರಷ್ಟು ಏರಿದವು.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,497 ಶೇರುಗಳು ಮುನ್ನಡೆ ಸಾಧಿಸಿದರೆ 1315 ಶೇರುಗಳು ಹಿನ್ನಡೆಗೆ ಗುರಿಯಾದವು. ಬಿಎಸ್ಇ ಮಿಡ್ ಕ್ಯಾಪ್ ಶೇ.1.25 ಹಾಗೂ ಸ್ಮಾಲ್ ಕ್ಯಾಪ್ ಶೇ.0.78ರ ಏರಿಕೆಯನ್ನು ಕಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.