ಮುಂಬಯಿ ಶೇರು ಪೇಟೆಯಲ್ಲಿ ಎಚ್ಚರಿಕೆಯ ನಡೆ; ಅತ್ಯಲ್ಪ ಇಳಿಕೆ
Team Udayavani, Jan 30, 2019, 11:25 AM IST
ಮುಂಬಯಿ : ಹೂಡಿಕೆದಾರರು ಮತ್ತು ವಹಿವಾಟುದಾರರು ಅತ್ಯಂತ ಎಚ್ಚರಿಕೆ ನಡೆ ತೋರಿದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಬುಧವಾರದ ವಹಿವಾಟನ್ನು 1.25 ಅಂಕಗಳ ನಷ್ಟದೊಂದಿಗೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 0.4 ಅಂಕಗಳ ನಷ್ಟದೊಂದಿಗೂ ನಿರಾಶಾದಾಯಕವಾಗಿ ಕೊನೆಗೊಳಿಸಿದವು.
ನಾಳೆ ಗುರುವಾರ ಜನವರಿ ತಿಂಗಳ ವಾಯಿದೆ ವಹಿವಾಟು ಚುಕ್ತಾ ಆಗಲಿರುವುದು, ಅಮೆರಿಕದ ಫೆಡ್ ರೇಟ್ ಪಾಲಿಸಿ ಗೊತ್ತಾಗಬೇಕಿರುವುದು ಮತ್ತು ಫೆ.1ರಂದು ಕೇಂದ್ರ ಮಧ್ಯಾವಧಿ ಬಜೆಟ್ ಪ್ರಕಟವಾಗಲಿರುವುದು – ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆ ಇಂದು ಬುಧವಾರ ಅತ್ಯಂತ ಎಚ್ಚರಿಕೆ ನಡೆ ತೋರಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,655 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,369 ಶೇರುಗಳು ಮುನ್ನಡೆ ಸಾಧಿಸಿದವು; 1,121 ಶೇರುಗಳು ಹಿನ್ನಡೆಗೆ ಗುರಿಯಾದವು; 165 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.