ನಿರಂತರ ಎರಡನೇ ದಿನವೂ ಸೆನ್ಸೆಕ್ಸ್, ನಿಫ್ಟಿ ಹೊಸ ಸಾರ್ವಕಾಲಿಕ ಎತ್ತರ
Team Udayavani, Aug 28, 2018, 10:32 AM IST
ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರ, ನಿರಂತರ ಎರಡನೇ ದಿನವೂ, ಹೊಸ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ.
ಇಂದಿನ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 182 ಅಂಕಗಳ ಜಿಗಿತವನ್ನು ಕಂಡ ಸೆನ್ಸೆಕ್ಸ್ 38,875.86 ಅಂಕಗಳ ಹೊಸ ಸಾರ್ವಕಾಲಿಕ ದಾಖಲೆಯ ಮಟ್ಟಕ್ಕೇರುವ ಸಾಧನೆ ಮಾಡಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,751.20 ಅಂಕಗಳ ಹೊಸ ಸಾರ್ವಕಾಲಿಕ ದಾಖಲೆಯ ಎತ್ತರಕ್ಕೇರಿ ದಿನದ ವಹಿವಾಟಿಗೆ ಶುಭಾರಂಭ ನೀಡಿತು.
ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆ ಮತ್ತು ತೇಜಿ ಕಂಡುಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯಲ್ಲಿಂದು ವಿದೇಶಿ ಮತ್ತು ದೇಶೀ ಹೂಡಿಕೆದಾರ ಸಂಸ್ಥೆಗಳು ಮುಂಚೂಣಿ ಶೇರುಗಳ ಭರಾಟ ಖರೀದಿಯಲ್ಲಿ ನಿರತವಾದವು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 156.66 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 38,850.77 ಅಂಕಗಳ ಮಟ್ಟದಲ್ಲೂ ನಿಫ್ಟಿ 45.50 ಅಂಕಗಳ ಏರಿಕೆಯೊಂದಿಗೆ 11,737.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಭಾರ್ತಿ ಇನ್‌ಫ್ರಾಟೆಲ್, ರಿಲಯನ್ಸ್, ಎಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಮಾರುತಿ ಸುಜುಕಿ ಶೇರುಗಳು ಇಂದು ಅತ್ಯಂತ ಸಕ್ರಿಯವಾಗಿದ್ದವು.
ಟಾಪ್ ಗೇನರ್‌ಗಳು : ಎನ್‌ಟಿಪಿಸಿ, ಸಿಪ್ಲಾ, ಹಿಂಡಾಲ್ಕೋ, ಕೋಲ್ ಇಂಡಿಯಾ, ಮಾರುತಿ ಸುಜುಕಿ; ಟಾಪ್ ಲೂಸರ್‌ಗಲು : ಎಸ್ ಬ್ಯಾಂಕ್, ಟೈಟಾನ್ ಕಂಪೆನಿ, ಗ್ರಾಸಿಂ, ಎಸ್‌ಬಿಐ, ಐಡಿಯಾ ಸೆಲ್ಯುಲರ್.
ಇಂದಿನ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಇಂದು 10 ಪೈಸೆಯಷ್ಟು ಸುಧಾರಿಸಿ 70.06 ರೂ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.