ಮುಂಬಯಿ ಶೇರು 3ನೇ ದಿನವೂ ಮುನ್ನಡೆ: 100 ಅಂಕ ಜಿಗಿತ
Team Udayavani, Apr 4, 2018, 10:59 AM IST
ಮುಂಬಯಿ : ಆರ್ಬಿಐ ಹಣಕಾಸು ನೀತಿ ಪರಾಮರ್ಶೆಯ ಪ್ರಕ್ರಿಯೆ ಇಂದಿನಿಂದ ಆರಂಭಗೊಂಡಿರುವಂತೆಯೇ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 100 ಅಂಕಗಳ ಜಿಗಿತವನ್ನು ಸಾಧಿಸಿತು.
ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 115.70 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,486.33 ಅಂಕಗಳ ಮಟ್ಟದಲ್ಲೂ ನಿಫ್ಟಿ 29 ಅಂಕಗಳ ಮುನ್ನಡೆಯೊಂದಿಗೆ 10,274.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಪರಾಮರ್ಶೆ ಸಮಿತಿಯ ಎರಡು ದಿನಗಳ ಸಭೆ ಇಂದು ಮತ್ತು ನಾಳೆ ನಡೆಯಲಿದೆ.
ನಿರಂತರ ಮೂರನೇ ದಿನ ತನ್ನ ಏರುಗತಿಯನ್ನು ಮುಂದುವರಿಸಿರುವ ಸೆನ್ಸೆಕ್ಸ್ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 98.15 ಅಂಕಗಳ ಜಿಗಿತವನ್ನು ಸಾಧಿಸಿ 33,468.78 ಅಂಕಗಳ ಮಟ್ಟಕ್ಕೇರಿತು. ಸೆನ್ಸೆಕ್ಸ್ ಕಳೆದ ಎರಡು ದಿನಗಳ ವಹಿವಾಟಿನಲ್ಲಿ 401.95 ಅಂಕಗಳನ್ನು ಸಂಪಾದಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 29.60 ಅಂಕಗಳ ಮುನ್ನಡೆಯನ್ನು ಸಾಧಿಸಿ 10,274.60 ಅಂಕಗಳ ಮಟ್ಟಕ್ಕೇರಿತು.
ಇಂದಿನ ಟಾಪ್ ಗೇನರ್ಗಳಾಗಿ ಟಾಟಾ ಮೋಟರ್, ಹೀರೋ ಮೋಟೋ ಕಾರ್ಪ್, ಬಜಾಜ್ ಆಟೋ, ಎಸ್ ಬ್ಯಾಂಕ್ ಮತ್ತು ಮಾರುತಿ ಸುಜುಕಿ ವಿಜೃಂಭಿಸಿದವು. ವಾಲ್ ಸ್ಟ್ರೀಟ್ನಲ್ಲಿನ ಧನಾತ್ಮಕ ಸನ್ನಿವೇಶವನ್ನು ಅನುಸರಿಸಿ ಏಶ್ಯನ್ ಶೇರು ಪೇಟೆಗಳಲ್ಲಿ ಕಂಡು ಬಂದಿರುವ ತೇಜಿ ಮುಂಬಯಿ ಶೇರು ಪೇಟೆಯಲ್ಲೂ ಪ್ರತಿಬಿಂಬಿಸಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.
ಡಾಲರ್ ಎದುರು ರೂಪಾಯಿ ವಿನಿಮಯ ದರ ಇಂದು 4 ಪೈಸೆಯಷ್ಟು ಚೇತರಿಸಿಕೊಂಡು 64.97 ರೂ. ಮಟ್ಟದಲ್ಲಿ ದಾಖಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.