ಕಚ್ಚಾ ತೈಲ ಬೆಲೆಯಲ್ಲಿ ಗಮನಾರ್ಹ ಇಳಿಕೆ: ಮುಂಬಯಿ ಶೇರು 107 ಅಂಕ ಏರಿಕೆ
Team Udayavani, Jul 17, 2018, 11:06 AM IST
ಮುಂಬಯಿ : ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯಲ್ಲಿ ಇಂದು ಮಂಗಳವಾರ ಮುಂಚೂಣಿ ಶೇರುಗಳ ಉತ್ತಮ ಖರೀದಿ ವ್ಯಕ್ತವಾಗುವುದರೊಂದಿಗೆ ಸೆನ್ಸೆಕ್ಸ್ ಇಂದಿನ ಆರಂಭಿಕ ವಹಿವಾಟಿನಲ್ಲಿ 107 ಅಂಕಗಳ ಮುನ್ನಡೆಯನ್ನು ದಾಖಲಿಸಿತು.
ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟು 224.64 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಇಂದು ಮಂಗಳವಾರ ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 34.23 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,358,00 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 13.70 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,950.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಚ್ ಪಿ ಸಿಎಲ್, ಸನ್ ಫಾರ್ಮಾ, ಐಸಿಐಸಿಐ ಬ್ಯಾಂಕ್, ಗೇಲ್, ಟಾಟಾ ಮೋಟರ್ ಶೇರುಗಳು ಟಾಪ್ ಗೇನರ್ಗಳಾಗಿದ್ದವು; ಟಾಪ್ ಲೂಸರ್ಗಳಾಗಿ ಎಚ್ಯುಎಲ್, ಭಾರ್ತಿ ಏರ್ಟೆಲ್, ಇಂಡಸ್ಇಂಡ್ ಬ್ಯಾಂಕ್, ಎನ್ಟಿಪಿಸಿ, ಈಚರ್ ಮೋಟರ್ ಶೇರುಗಳು ಹಿನ್ನಡೆ ಕಂಡವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 21 ಪೈಸೆಗಳ ಏರಿಕೆಯನ್ನು ದಾಖಲಿಸಿ 68.36 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.