ಬುಧವಾರದ ಆರಂಭಿಕ ವಹಿವಾಟು : ಸೆನ್ಸೆಕ್ಸ್ 100 ಅಂಕ ಜಿಗಿತ
Team Udayavani, Mar 13, 2019, 5:19 AM IST
ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ದಾಖಲಿಸಿತು.
ಭಾರತೀಯ ಶೇರು ಮಾರುಕಟ್ಟೆಯತ್ತ ವಿದೇಶೀ ಬಂಡವಾಳ ಭಾರೀ ಪ್ರಮಾಣದಲ್ಲಿ ಹರಿದು ಬರುತ್ತಿರುವ ಕಾರಣ ಮುಂಬಯಿ ಶೇರು ಪೇಟೆಯಲ್ಲಿ ಉತ್ತಮ ತೇಜಿ ಕಂಡು ಬಂದಿದ್ದು ಇಂದು ಹೂಡಿಕೆದಾರರು ಮತ್ತು ವಹಿವಾಟುದಾರರು ಬ್ಯಾಂಕಿಂಗ್ ಶೇರುಗಳ ವ್ಯಾಪಕ ಖರೀದಿ ನಡೆಸಿದರು.
ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್ 21.68 ಅಂಕಗಳ ಏರಿಕೆಯೊಂದಿಗೆ 37,557.34 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 8.40 ಅಂಕಗಳ ಹಿನ್ನಡೆಯೊಂದಿಗೆ 11,292.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದು 8 ಪೈಸೆಗಳ ಏರಿಕೆಯನ್ನು ದಾಖಲಿಸಿ 69.63 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ನಿನ್ನೆ ಮಂಗಳವಾರ ಡಾಲರ್ ಎದುರು ರೂಪಾಯಿ 18 ಪೈಸೆಯ ಜಿಗಿತವನ್ನು ದಾಖಲಿಸಿ 69.71 ರೂ. ಮಟ್ಟಕ್ಕೆ ಏರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.