ನಿರಂತರ 3ನೇ ದಿನ ಲಾಭ : ಮುಂಬಯಿ ಶೇರು 100 ಅಂಕ ಮುನ್ನಡೆ
Team Udayavani, Mar 22, 2018, 11:38 AM IST
ಮುಂಬಯಿ : ನಿರಂತರ ಮೂರನೇ ದಿನ ಲಾಭದ ಹಾದಿಯಲ್ಲಿ ಸಾಗುತ್ತಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 100 ಅಂಕಗಳ ಮುನ್ನಡೆಯನ್ನು ಸಾಧಿಸಿತು.
ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ಎಲ್ಲರ ನಿರೀಕ್ಷೆಗೆ ಅನುಗುಣವಾಗಿ ಸಾಲದ ಮೇಲಿನ ತನ್ನ ಬಡ್ಡಿದರವನ್ನು ಶೇ.0.25ರಷ್ಟು ಏರಿಸಿರುವ ಬಗ್ಗೆ ಜಾಗತಿಕ ಶೇರು ಮಾರುಕಟ್ಟೆಗಳು ತಲೆಕೆಡಿಸಿಕೊಳ್ಳಲಿಲ್ಲ.
ಇಂದಿನ ಆರಂಭಿಕ ವಹಿವಾಟಿನಲ್ಲಿ ಹೆಲ್ತ್ ಕೇರ್, ಮೆಟಲ್, ಕ್ಯಾಪಿಟಲ್ ಗೂಡ್ಸ್, ಆಯಿಲ್ ಆ್ಯಂ ಡ್ ಇನ್‌ಫ್ರಾಸ್ಟ್ರಕ್ಚರ್, ಆಟೋ, ಎಫ್ಎಂಸಿಜಿ ರಂಗದ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಉತ್ತಮ ಮುನ್ನಡೆ ಕಂಡವು.
ಬೆಳಗ್ಗೆ 11.40ರ ಹೊತ್ತಿಗೆ ಸೆನ್ಸೆಕ್ಸ್ 11.52 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 3,147.70 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 0.50 ಅಂಕಗಳ ಮುನ್ನಡೆಯೊಂದಿಗೆ 10,155.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ರಿಯನ್ಸ್, ಎಸ್ ಬ್ಯಾಂಕ್, ಟಾಟಾ ಸ್ಟೀಲ್, ಸನ್ ಫಾರ್ಮಾ, ಐಸಿಐಸಿಐ ಬ್ಯಾಂಕ್ ಶೇರುಗಳು ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ರೂಪಾಯಿ ವಿನಿಮಯ ದರ ಇಂದಿನ ಆರಂಭಿಕ ವಹಿವಾಟಿನಲ್ಲಿ 9 ಪೈಸೆಯಷ್ಟು ಸುಧಾರಿಸಿ 65.12 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ನಿನ್ನೆಯ ಕುಸಿತದಿಂದ ಪುಟಿದೆದ್ದ ಸೆನ್ಸೆಕ್ಸ್: 566 ಅಂಕ ಏರಿಕೆ
Stock: ಟ್ರಂಪ್ ನೀತಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 1,200 ಅಂಕ ಕುಸಿತ, 7 ಲಕ್ಷ ಕೋಟಿ ನಷ್ಟ
Bullet Train: ಮುಂಬೈ-ಅಹಮದಾಬಾದ್ ಹೈಸ್ಪೀಡ್ ಕಾರಿಡಾರ್ ವಿದ್ಯುದ್ದೀಕರಣ ಕಾರ್ಯ ಶುರು
The Shoolin Group: ಮಂಗಳೂರಿನ ಹೊಸ ಪ್ರೀಮಿಯಂ ಹೋಟೆಲ್ ಶೂಲಿನ್ ಕಂಫರ್ಟ್ಸ್ ಉದ್ಘಾಟನೆ
Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್