ಮುಂಬಯಿ ಶೇರು 200 ಅಂಕ ಮುನ್ನಡೆ, 10,200 ಮುಟ್ಟಿದ ನಿಫ್ಟಿ
Team Udayavani, Mar 27, 2018, 10:53 AM IST
ಮುಂಬಯಿ : ವಾಣಿಜ್ಯ ಸಮರ ಸ್ಫೋಟಗೊಳ್ಳದಂತೆ ಅಮೆರಿಕ ಮತ್ತು ಚೀನ ನಡುವೆ ಸಂಧಾನ ಮಾತುಕತೆಗಳು ನಡೆಯತ್ತಿರುವುದಾಗಿ ವರದಿಯಾಗಿರುವ ಹಿನ್ನೆಲೆಯಲ್ಲಿ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆ ತೋರಿ ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 200 ಅಂಕಗಳ ಮುನ್ನಡೆಯನ್ನು ದಾಖಲಿಸಿತು.
ನಿನ್ನೆ ಸೋಮವಾರದ ವಹಿವಾಟಿನಲ್ಲಿ 469.87 ಅಂಕಗಳ ಮುನ್ನಡೆ ಸಾಧಿಸಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಮಂಗಳವಾರದ ವಹಿವಾಟಿನಲ್ಲಿ ಬೆಳಗ್ಗೆ 10.45ರ ಹೊತ್ತಿಗೆ 93.44 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,159.85 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 35.20 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,165.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಐಸಿಐಸಿಐ ಬ್ಯಾಂಕ್, ಟಾಟಾ ಸ್ಟೀಲ್, ಎಸ್‌ಬಿಐ, ಎಸ್ ಬ್ಯಾಂಕ್, ಎಚ್ ಡಿ ಎಫ್ ಸಿ ಅತ್ಯಂತ ಕ್ರಿಯಾಶೀಲವಾಗಿದ್ದವು. ಎಚ್‌ಪಿಸಿಎಲ್, ಬಜಾಜ್ ಫೈನಾನ್ಸ, ಎಕ್ಸಿಸ್ ಬ್ಯಾಂಕ್, ಟಾಟಾ ಸ್ಟೀಲ್, ಐಸಿಐಸಿಐ ಬ್ಯಾಂಕ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು. ಇದೇ ವೇಳೆ ಭಾರ್ತಿ ಇನ್‌ಫ್ರಾಟೆಲ್,… ಭಾರ್ತಿ ಏರ್‌ಟೆಲ್, ಗೇಲ್, ಹೀರೋ ಮೋಟೋ ಕಾರ್ಪ್, ಬಜಾಜ್ ಆಟೋ ಶೇರುಗಳು ಹಿನ್ನಡೆಗೆ ಗುರಿಯಾಗಿ ಟಾಪ್ ಲೂಸರ್ ಎನಿಸಿಕೊಂಡವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 9 ಪೈಸೆಯಷ್ಟು ಚೇತರಿಸಿ ನಾಲ್ಕು ವಾರಗಳ ಗರಿಷ್ಠವಾಗಿ 64.78 ರೂ. ಮಟ್ಟದಲ್ಲಿ ದಾಖಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.