ಮುಂಬಯಿ ಶೇರು ಪೇಟೆ : ಮತ್ತೂಂದು ಸಾರ್ವಕಾಲಿಕ ಎತ್ತರದ ಸಾಧನೆ
Team Udayavani, May 11, 2017, 11:12 AM IST
ಮುಂಬಯಿ : ದಾಖಲೆಗಳ ಮೇಲೆ ದಾಖಲೆಗಳನು ಬರೆಯುತ್ತಾ ಸಾಗಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 30,346.69 ಅಂಕಗಳ ಸಾರ್ವಕಾಲಿಕ ಎತ್ತರದ ದಾಖಲೆಯನ್ನು ಬರೆಯಿತಾದರೆ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9,450.65 ಅಂಕಗಳ ಮಟ್ಟವನ್ನು ಏರುವ ಮೂಲಕ ಹೊಸ ಎತ್ತರ ತಲುಪಿದ ದಾಖಲೆಯನ್ನು ಬರೆಯಿತು.
ವಿದೇಶೀ ನೇರ ಹೂಡಿಕೆ ಬಂಡವಾಳ ನಿರಂತರವಾಗಿ ಹರಿದು ಬರುತ್ತಿರುವುದು, ಈ ಬಾರಿಯ ಮುಂಗಾರು ಮಳೆ ಚೆನ್ನಾಗಿರಲಿದೆ ಎಂಬ ಹವಾಮಾನ ಇಲಾಖೆಯ ಭವಿಷ್ಯವಾಣಿ ಮತ್ತು ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ಪ್ರವೃತ್ತಿ ತೋರಿ ಬಂದಿರುವುದು – ಹೀಗೆ ಈ ಎಲ್ಲ ಕಾರಣಗಳು ಸೆನ್ಸೆಕ್ಸ್ ಮತ್ತು ನಿಫ್ಟಿಯ ಸಾರ್ವಕಾಲಿಕ ದಾಖಲೆಗಳಿಗೆ ಅನುವು ಮಾಡಿಕೊಟ್ಟಿವೆ.
ಇಂದು ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್ 109.41 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 30,357.58 ಅಂಕಗಳ ಮಟ್ಟದಲ್ಲೂ, ನಿಫ್ಟಿ 40.20 ಅಂಕಗಳ ಏರಿಕೆಯೊಂದಿಗೆ 9,447.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಹಿಂಡಾಲ್ಕೋ, ಝೀ ಎಂಟರ್‌ಟೇನ್‌ಮೆಂಟ್, ಎಚ್ ಡಿ ಎಫ್ ಸಿ, ರಿಲಯನ್ಸ್ ಮತ್ತು ಎಕ್ಸಿಸ್ ಬ್ಯಾಂಕ್ ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.