ಕರ್ನಾಟಕದ ಅಸ್ಥಿರತೆ : ಮುಂಬಯಿ ಶೇರು 156 ಅಂಕ ಕುಸಿತ
Team Udayavani, May 16, 2018, 4:15 PM IST
ಮುಂಬಯಿ : ಕರ್ನಾಟಕದಲ್ಲಿ ಹೊಸ ಸರಕಾರ ರಚಿಸುವಲ್ಲಿ ರಾಜಕೀಯ ಅಸ್ಥಿರತೆ ಮತ್ತು ಅನಿಶ್ಚಿತತೆ ತಲೆದೋರಿರುವ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 156.04 ಅಂಕಗಳ ಕುಸಿತದೊಂದಿಗೆ 35,387.88 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 60.75 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,741.10 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿದೆ.
ನಿನ್ನೆ ಮಂಗಳವಾರ ಅಮೆರಿಕದ ವಾಲ್ ಸ್ಟ್ರೀಟ್ ನಷ್ಟಕ್ಕೆ ಗುರಿಯಾದುದನ್ನು ಅನುಸರಿಸಿ ಇಂದು ಏಶ್ಯನ್ ಮಾರುಕಟ್ಟೆಗಳಲ್ಲಿ ನಿರುತ್ತೇಜನ ಮಡುಗಟ್ಟಿತ್ತು. ಅಂತೆಯೇ ಮುಂಬಯಿ ಶೇರು ಪೇಟೆ ಕೂಡ ಕುಸಿತದೊಂದಿಗೆ ದಿನದ ವಹಿವಾಟನ್ನು ಆರಂಭಿಸಿತ್ತು.
ಇಂದು ಮುಂಬಯಿ ಶೇರುಪೇಟೆಯಲ್ಲಿ ಒಟ್ಟು 2,757 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,016 ಶೇರುಗಳು ಮುನ್ನಡೆ ಸಾಧಿಸಿದವು; 1,606 ಶೇರುಗಳು ಹಿನ್ನಡೆಗೆ ಗುರಿಯಾದವು; 135 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.