ಐದನೇ ದಿನ ಮುಗ್ಗರಿಸಿದ ಮುಂಬಯಿ ಶೇರು; 9,400 ಕಾಯ್ದುಕೊಂಡ ನಿಫ್ಟಿ
Team Udayavani, May 12, 2017, 4:40 PM IST
ಮುಂಬಯಿ : ನಾಲ್ಕು ದಿನಗಳ ನಿರಂತರ ಏರು ಹಾದಿಯಲ್ಲಿ ಸಾಗಿ ಬಂದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಐದನೇ ದಿನದ ಶುಕ್ರವಾರದ ವಹಿವಾಟಿನಲ್ಲಿ ಮುಗ್ಗರಿಸಿದ್ದು 62.83 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 30,188.15 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 21.50 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 9.400.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇಂದು ಹೂಡಿಕೆದಾರರು ಹಾಗೂ ವಹಿವಾಟುದಾರರು ಲಾಭ ನಗದೀಕರಣಕ್ಕೆ ಮುಂದಾದ ಪ್ರಯುಕ್ತ ಸೆನ್ಸೆಕ್ಸ್, ನಿಫ್ಟಿ ಕುಸಿದರೂ, 9,400 ಅಂಕಗಳ ಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ನಿಫ್ಟಿ ಸಫಲವಾದದ್ದು ವಿಶೇಷ.
ಇಂದಿನ ವಹಿವಾಟಿನಲ್ಲಿ ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,784 ಶೇರುಗಳು ಹಿನ್ನಡೆಗೆ ಗುರಿಯಾದವು; 1,000 ಶೇರುಗಳು ಮುನ್ನಡೆಯನ್ನು ಕಂಡವು. ಬಿಎಸ್ಇ ಮಿಡ್ ಕ್ಯಾಪ್ ಶೇ.0.7 ಹಾಗೂ ಸ್ಮಾಲ್ ಕ್ಯಾಪ್ ಶೇ.0.8ರ ನಷ್ಟಕ್ಕೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.