ಮೇ ವಾಯಿದೆ ವಹಿವಾಟಿಗೆ ಭರ್ಜರಿ ಆರಂಭ: ಸೆನ್ಸೆಕ್ಸ್ 263 ಅಂಕ ಜಂಪ್
Team Udayavani, Apr 27, 2018, 11:30 AM IST
ಮುಂಬಯಿ : ಮೇ ತಿಂಗಳ ವಾಯಿದೆ ವಹಿವಾಟಿಗೆ ಭರ್ಜರಿ ಆರಂಭ ನೀಡಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ನಿರಂತರ ಎರಡನೇ ದಿನದ ಏರುಗತಿಯಲ್ಲಿ 180 ಅಂಕಗಳ ಜಿಗಿತವನ್ನು ಸಾಧಿಸಿತು.
ಪ್ರಮುಖ ಕಂಪೆನಿಗಳ ತ್ತೈಮಾಸಿಕ ಫಲಿತಾಂಶಗಳು ಉತ್ತೇಜನಕಾರಿಯಾಗಿರುವ ಹಿನ್ನೆಲೆಯಲ್ಲಿ ಮತ್ತು ಏಶ್ಯನ್ ಶೇರು ಪೇಟೆಗಳಲ್ಲಿ ಆಶಾದಾಯಕ ವಾತಾವರಣ ನೆಲೆಗೊಂಡಿರುವ ಕಾರಣ, ಮುಂಬಯಿ ಶೇರು ಇಂದು ಉತ್ತಮ ತೇಜಿಯನ್ನು ಕಂಡಿತು.
ಬೆಳಗ್ಗೆ 11.30ರ ಹೊತ್ತಿಗೆ ಸೆನ್ಸೆಕ್ಸ್ 262.81 ಅಂಕಗಳ ಮುನ್ನಡೆಯೊಂದಿಗೆ 34,976.41 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 73.20 ಅಂಕಗಳ ಮುನ್ನಡೆಯೊಂದಿಗೆ 10,691.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಎಕ್ಸಿಸ್ ಬ್ಯಾಂಕ್, ಎಸ್ ಬ್ಯಾಂಕ್, ರಿಲಯನ್ಸ್, ಮಾರುತಿ ಸುಜುಕಿ,ಎಸ್‌ಬಿಐ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು. ರಿಲಯನ್ಸ್ ಮಾರುತಿ ಸುಜುಕಿ ಇಂದು ತಮ್ಮ ತ್ತೈಮಾಸಿಕ ಫಲಿತಾಂಶ ಪ್ರಕಟಿಸಲಿದ್ದು ಅದಕ್ಕೆ ಮುನ್ನವೇ ಅವುಗಳ ಶೇರು ಧಾರಣೆ ಅನುಕ್ರಮವಾಗಿ ಶೇ.2.66 ಮತ್ತು ಶೇ.1.28ರಷ್ಟು ಏರಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.