ನಿರಂತರ 3ನೇ ದಿನವೂ ಗೆಲುವಿನ ಓಟ: ಸೆನ್ಸೆಕ್ಸ್ 204 ಅಂಕ ಜಂಪ್
Team Udayavani, Nov 28, 2018, 5:10 PM IST
ಮುಂಬಯಿ : ನಿರಂತರ ಮೂರನೇ ದಿನದ ಏರು ಗತಿಯ ಓಟದಲ್ಲಿ ತೊಡಗಿರುವ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 203.81 ಅಂಕಗಳ ಜಿಗಿತದೊಂದಿಗೆ 35,716.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 43.25 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 10,728.85 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ತಿಂಗಳ ಕೊನೇ ಗುರುವಾರವಾಗಿರುವ ನಾಳೆ ನವೆಂಬರ್ ತಿಂಗಳ ವಾಯಿದೆ ವಹಿವಾಟು ಚುಕ್ತಾ ಆಗಲಿರುವ ಕಾರಣ ಇಂದು ವಹಿವಾಟುದಾರರ ವ್ಯಾಪಕ ಶಾರ್ಟ್ ಕವರಿಂಗ್ ನಲ್ಲಿ ತೊಡಗಿಕೊಂಡದ್ದೇ ಮುಂಬಯಿ ಶೇರು ಪೇಟೆಯ ಜಿಗಿತಕ್ಕೆ ಕಾರಣವಾಯಿತು. ಮೇಲಾಗಿ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ಧನಾತ್ಮಕತೆ ಮತ್ತು ಅಮೆರಿಕ-ಚೀನ ವಾಣಿಜ್ಯ ಬಿಕ್ಕಟ್ಟು ತಾರ್ಕಿಕ ಅಂತ್ಯ ಕಾಣುವುದೆಂಬ ಆಶಾ ಭಾವನೆ ಕೂಡ ಇದಕ್ಕೆ ಪೂರಕವಾಯಿತು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,770 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 972 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,639 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 159 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.