ಬಜೆಟ್‌ ಧಮಾಕಾ : ಮುಂಬಯಿ ಶೇರು 212 ಅಂಕ ಜಿಗಿತ


Team Udayavani, Feb 1, 2019, 11:35 AM IST

sensex-musings1-700.jpg

ಮುಂಬಯಿ : ಕೇಂದ್ರ ಇಂದು ಲೋಕಸಭೆಯಲ್ಲಿ  ಮಂಡಿಸಿರುವ  ರೈತ, ಗ್ರಾಹಕ, ಮಧ್ಯಮ ವರ್ಗ ಸ್ನೇಹಿ ಮದ್ಯಾವಧಿ ಬಜೆಟ್‌ ದೇಶದ ಆರ್ಥಿಕತೆಗೆ ವಿಶೇಷ boost ನೀಡುವುದೆನ್ನುವ ಲೆಕ್ಕಾಚಾರದಲ್ಲಿ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ವಹಿವಾಟನ್ನು 212.74 ಅಂಕಗಳ ಮುನ್ನಡೆಯೊಂದಿಗೆ 36,221.32 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು. 

ದಿನಪೂರ್ತಿ ಏರಿಳಿತಗಳನ್ನೇ ಕಾಣುತ್ತಾ ಸಾಗಿದ ಸೆನ್ಸೆಕ್ಸ್‌, ಒಂದು ಹಂತದಲ್ಲಿ 500ಕ್ಕೂ ಅಧಿಕ ಅಂಕಗಳ ಮುನ್ನಡೆಯನ್ನು ಕಂಡು 36,778.14 ಅಂಕಗಳ ಮಟ್ಟವನ್ನೇರಿತ್ತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 62.70 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,893.65 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ತಿಂಗಳ ಸಂಬಳ ಪಡೆಯುವ ಸುಮಾರು 3 ಕೋಟಿ ಮಧ್ಯಮ ವರ್ಗದ ಜನರ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೇರಿಸಿರುವ ಕೇಂದ್ರ ಬಜೆಟ್‌ ನಿಂದ ಗ್ರಾಹಕ ಮಾರುಕಟ್ಟೆಗೆ ಭಾರೀ ಲಾಭವಾಗಲಿದೆ ಎಂಬ ಲೆಕ್ಕಾಚಾರದಲ್ಲಿ ಇಂದು ಎಫ್ಎಂಸಿಜಿ ರಂಗದ ಶೇರುಗಳು ಉತ್ತಮ ಏರಿಕೆ ದಾಖಲಿಸಿದವು. 

ಸರಕಾರ ತೆರಿಗೆ ಪಾವತಿದಾರರ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು ಈಗಿನ 40,000 ರೂ.ಗಳಿಂದ 50,000 ರೂ.ಗೆ ಏರಿಸಿರುವುದು ಇನ್ನೊಂದು ಲಾಭವಾಗಿ ಕಂಡು ಬಂತು. 

ಇಂದಿನ ವಹಿವಾಟಿನಲ್ಲಿ ಹೀರೋ ಮೋಟೋ ಕಾರ್ಪ್‌, ಮಾರುತಿ, ಎಚ್‌ ಸಿ ಎಲ್‌ ಟೆಕ್‌, ಏಶ್ಯನ್‌ ಪೇಂಟ್‌, ಬಜಾಜ್‌ ಆಟೋ, ಬಜಾಜ್‌ ಫಿನಾನ್ಸ್‌, ಎಚ್‌ ಡಿ ಎಫ್ ಸಿ, ಆರ್‌ಐಎಲ್‌ ಶೇರುಗಳು ಶೇ.7.48ರಷ್ಟು ಏರಿದವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು  2,677 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,197 ಶೇರುಗಳು ಮುನ್ನಡೆ ಸಾಧಿಸಿದವು; 1,340 ಶೇರುಗಳು ಹಿನ್ನಡೆಗೆ ಗುರಿಯಾದವು; 140 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.