ಕಾರು ಮಾರಾಟದಲ್ಲಿ ಶೇ.11ರಷ್ಟು ಏರಿಕೆ
Team Udayavani, Nov 19, 2019, 4:20 PM IST
ಹೊಸದಿಲ್ಲಿ: ವಾಹನೋದ್ಯಮಕ್ಕೆ ತೀವ್ರ ಹಿನ್ನಡೆಯುಂಟಾಗಿದೆ ಎಂದು ಹೇಳಲಾಗುತ್ತಿದ್ದರೂ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅಕ್ಟೋಬರ್‌ನಲ್ಲಿ ವಾಹನ ಮಾರಾಟ 2.48 ಲಕ್ಷ ಆಗುವುದರೊಂದಿಗೆ ಶೇ.11ರಷ್ಟು ಏರಿಕೆ ಕಂಡಿದೆ.
ದೀಪಾವಳಿ ಮತ್ತು ನವರಾತ್ರಿ ಸಂದರ್ಭ ವಿವಿಧ ಕಂಪೆನಿಗಳು ಗ್ರಾಹಕರಿಗೆ ಸಾಕಷ್ಟು ಆಫರ್‌ಗಳನ್ನು ಪ್ರಕಟಿಸಿದ್ದು, ಈ ಹಿನ್ನೆಲೆಯಲ್ಲಿ ಮಾರಾಟ ಏರಿಕೆಯಾಗಲು ಕಾರಣವಾಗಿದೆ ಎಂದು ಹೇಳಲಾಗಿದೆ.
ಅಟೋಮೊಬೈಲ್ ಡೀಲರ್‌ಗಳ ಒಕ್ಕೂಟ ನೀಡಿದ ಅಂಕಿ ಅಂಶಗಳ ಪ್ರಕಾರ ಮಾರಾಟ ಏರಿಕೆಯಾಗಿರುವುದು ಗೊತ್ತಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ಕಾರುಗಳ ಮಾರಾಟ 2,23,498 ಆಗಿತ್ತು.
ಇದೇ ವೇಳೆ ಕಳೆದ ವರ್ಷಕ್ಕೆ ಹೋಲಿಸಿದರೆ ದ್ವಿಚಕ್ರ ವಾಹನಗಳ ಮಾರಾಟ ಶೇ.5ರಷ್ಟು ಏರಿಕೆಯಾಗಿದೆ. ಅಕ್ಟೋಬರ್‌ನಲ್ಲಿ ಮಾರಾಟ 13,34,941 ಆಗಿತ್ತು. ತ್ರಿಚಕ್ರ ವಾಹನಗಳ ಮಾರಾಟ ಶೇ.4ರಷ್ಟು ಏರಿಕೆ ಕಂಡಿದ್ದು 59,573 ಆಗಿದೆ.
ಇದರೊಂದಿಗೆ 2018ರ ಹಬ್ಬದ ಸಮಯ ಮಾರಾಟವಾದ್ದಕ್ಕಿಂತ ಈ ಬಾರಿ ಕಾರು ಮಾರಾಟ ಹೆಚ್ಚಿದೆ ಎಂದು ತಯಾರಕ ಕಂಪೆನಿಗಳೂ ಒಪ್ಪಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.