ಆನ್ ಲೈನ್ ಮೂಲಕ ಖರೀದಿಗೆ ಕಾನೂನು ಮಿತಿ?
ಹೆಚ್ಚಿದ ವಂಚನೆ ಪ್ರಕರಣದಿಂದಾಗಿ ಕೇಂದ್ರದ ಇಂಗಿತ
Team Udayavani, Dec 17, 2019, 2:09 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಇ- ಕಾಮರ್ಸ್ ವೆಬ್‌ಸೈಟ್ ಗಳ ಕಾರ್ಯನಿರ್ವಹಣೆ ಮೇಲೆ ನಿಗಾ ಮತ್ತು ನಿಯಂತ್ರಣ ಇರಿಸಲು ರಚಿಸಲಾಗುತ್ತಿರುವ ಕಾನೂನಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸಿ ನಡೆಸುವ ಖರೀದಿ ಅಂಶಗಳೂ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ.
ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಪಿನ್‌ಟೆರೆಸ್ಟ್ ಮತ್ತು ವಾಟ್ಸ್ ಆ್ಯಪ್‌ಗಳ ಮೂಲಕ ನಡೆಸಲಾಗುತ್ತಿರುವ ವಾಣಿಜ್ಯಿಕ ವಹಿವಾಟುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಂಚನೆ ಪ್ರಕರಣಗಳು ವರದಿಯಾಗುತ್ತಿವೆ. ಈ ಬಗ್ಗೆ ಗ್ರಾಹಕರಿಗಾಗಿ ಇರುವ ರಾಷ್ಟ್ರೀಯ ದೂರು ಸ್ವೀಕರಿಸುವ ವ್ಯವಸ್ಥೆಯಲ್ಲಿ ಮತ್ತು ಆಯಾ ವೆಬ್‌ಸೈಟ್‌ಗಳ ಗ್ರಾಹಕರ ಕುಂದು-ಕೊರತೆ ಪರಿಹರಿ ಸುವ ವಿಭಾಗಕ್ಕೆ ವಂಚನೆಯ ದೂರುಗಳೇ ಹೆಚ್ಚಾಗಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವಾಲಯ ಈ ಬಗ್ಗೆ ಕಾನೂನು ಸಿದ್ಧಪಡಿಸು ತ್ತಿದ್ದು, ಅದರಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಪಿನ್‌ಟೆರೆಸ್ಟ್ ಮತ್ತು ವಾಟ್ಸ್‌ಆ್ಯಪ್‌ಗ್ಳ ಮೂಲಕ ನಡೆಸಲಾಗುವ ವಹಿವಾಟುಗಳನ್ನು ನಿಯಮದ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆಸುತ್ತಿದೆ. ಸ್ನೇಹಿತರಿಂದ ಸ್ನೇಹಿತರಿಗೆ (ಪೀರ್2 ಪೀರ್) ಮಾದರಿಯಲ್ಲಿ ಈ ವಹಿವಾಟು ನಡೆಯುತ್ತಿದೆ, ಅದನ್ನು ನಿಯಮ ವ್ಯಾಪ್ತಿಗೆ ತರಬೇಕಾಗಿದೆ. ಈ ಮೂಲಕ ವಂಚನೆ ಪ್ರಕರಣಗಳಿಗೆ ತಡೆಯೊಡ್ಡಲು ಅವಕಾಶ ಸಿಗಲಿದೆ.
ಭಾರತದಲ್ಲಿ ವಾಟ್ಸ್‌ಆ್ಯಪ್ 400 ಮಿಲಿಯ, ಫೇಸ್‌ಬುಕ್ 250 ಮಿಲಿಯ ಬಳಕೆದಾರರು ಇದ್ದಾರೆ. ಅಧಿಕಾರಿಗಳ ಪ್ರಕಾರ ಗ್ರಾಹಕರ ಕಾಯ್ದೆಯ ನಿಯಮಗಳ ಅನ್ವಯ ಆಂಶಿಕವಾಗಿ ಸಮಸ್ಯೆ ಪರಿಹರಿಸಲು ಸಾಧ್ಯವಿದೆ. ವಾಟ್ಸ್‌ಆ್ಯಪ್, ಟೆಲೆಗ್ರಾಂಗಳಲ್ಲಿ ಸದ್ಯದ ಸ್ಥಿತಿಯಲ್ಲಿ ವ್ಯವಹಾರದ ಮೂಲ ಪತ್ತೆ ಹಚ್ಚಲು ಸಾಧ್ಯವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.