ಬಜೆಟ್‌ನಲ್ಲಿ ಈಕ್ವಿಟಿ ಮೇಲಿನ ತೆರಿಗೆ ಪ್ರಮಾಣ ಕಡಿತ?
Team Udayavani, Dec 19, 2019, 1:07 AM IST
ಹೊಸದಿಲ್ಲಿ: ದೇಶದ ಮಧ್ಯಮ ವರ್ಗ ಮತ್ತು ಸಂಬಳದಾರರು ಬಹುಕಾಲದಿಂದ ನಿರೀಕ್ಷೆ ಮಾಡುತ್ತಿದ್ದ ವೈಯಕ್ತಿಕ ಆದಾಯ ತೆರಿಗೆ ಕಡಿತದ ಘೋಷಣೆ ಬಜೆಟ್‌ನಲ್ಲಿ ಹೊರ ಬೀಳುವ ಸಾಧ್ಯತೆ ಇದೆ. ಇದರ ಜತೆಗೆ ಈಕ್ವಿಟಿ ಹೂಡಿಕೆಗಳ ಮೇಲೆ ವಿಧಿಸಲಾಗುತ್ತಿರುವ ತೆರಿಗೆ ಪ್ರಮಾಣವೂ ಕಡಿಮೆಯಾಗುವ ಸಾಧ್ಯತೆಗಳು ಇವೆ. ದೇಶದ ಅರ್ಥ ವ್ಯವಸ್ಥೆಯ ಬೆಳವಣಿಗೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂಥ ಕ್ರಮಗಳನ್ನು ಕೈಗೊಳ್ಳಲಾಗುವ ಬಗ್ಗೆ ಯೋಚನೆಗಳು ಇವೆ ಎಂದು ಕೇಂದ್ರ ಸರಕಾರದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ದೇಶದ ಅರ್ಥ ವ್ಯವಸ್ಥೆಯ ಪ್ರಗತಿ ದರ ಆರು ವರ್ಷಗಳಿಗೆ ಹೋಲಿಕೆ ಮಾಡಿದರೆ ಪ್ರಸಕ್ತ ವರ್ಷದ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಶೇ.4.5ಕ್ಕೆ ತಲುಪಿತ್ತು. ಇದರ ಜತೆಗೆ ಕೇಂದ್ರ ಸರಕಾರಕ್ಕೆ ವೈಯಕ್ತಿಕ ಆದಾಯ ತೆರಿಗೆ ಪ್ರಮಾಣ ಕಡಿಮೆ ಮಾಡಬೇಕು ಎಂಬ ಬಗ್ಗೆ ಮನವಿಗಳೂ ಸಲ್ಲಿಕೆಯಾಗಿದ್ದವು. ಆದಾಯ ತೆರಿಗೆಯನ್ನು ಸಂಪೂರ್ಣವಾಗಿ ರದ್ದು ಮಾಡಬೇಕು ಎಂಬ ಸಲಹೆಯೂ ಇದೆ. ಈ ಬಗ್ಗೆ ಪ್ರಧಾನ ಮಂತ್ರಿಗಳ ಕಚೇರಿ ಮಟ್ಟದಲ್ಲಿಯೂ ಕೂಡ ಚರ್ಚೆಯಾಗಿದೆ ಎಂದು ಹಿರಿಯ ಅಧಿಕಾರಿ ಹೇಳಿಕೊಂಡಿದ್ದಾರೆ.
ಫೆಡರೇಷನ್ ಆಫ್ ಇಂಡಿಯನ್ ಛೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಕೇಂದ್ರಕ್ಕೆ ಸಲ್ಲಿಸಿರುವ ಮನವಿಯಲ್ಲಿ ಆದಾಯ ತೆರಿಗೆ ಪ್ರಮಾಣ ಕಡಿಮೆ ಮಾಡಿದರೆ ಅರ್ಥ ವ್ಯವಸ್ಥೆ ಪುಟಿದೇಳಲು ನೆರವಾಗಲಿದೆ. ಜತೆಗೆ ವಿವಿಧ ರೀತಿಯ ಸರಕು ಮತ್ತು ಸೇವೆಗಳಿಗೆ ಹೆಚ್ಚು ಬೇಡಿಕೆ ಬರುತ್ತದೆ ಎಂದು ಪ್ರತಿಪಾದಿಸಿದೆ. ಇವನ್ನು ಸರಕಾರ ಪರಿಗಣಿಸಿ ಬಜೆಟ್‌ನಲ್ಲಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.