ರಾಜ್ಯಗಳಿಗೆ 35 ಸಾವಿರ ಕೋಟಿ ಜಿಎಸ್‌ಟಿ ಪರಿಹಾರ
Team Udayavani, Dec 17, 2019, 1:20 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೇಂದ್ರ ಸರಕಾರ ವಿವಿಧ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್‌ಟಿ ಜಾರಿಯ ಬಳಿಕ ಪರಿಹಾರ ನೀಡಿಕೆಯ ಅನ್ವಯ ಸೋಮವಾರ ಒಟ್ಟು 35, 298 ಕೋಟಿ ರೂ. ಬಿಡುಗಡೆ ಮಾಡಿದೆ. ಬುಧವಾರ (ಡಿ. 18) ರಂದು ಹೊಸದಿಲ್ಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ 38ನೇ ಜಿಎಸ್‌ಟಿ ಮಂಡಳಿ ಸಭೆ ನಡೆಯುವುದಕ್ಕೆ ಮುಂಚಿತವಾಗಿ ಮೊತ್ತ ಬಿಡುಗಡೆ ಮಾಡಲಾಗಿದೆ.
ಎನ್‌ಡಿಎಯೇತರ ರಾಜ್ಯ ಸರಕಾರಗಳ ಮುಖ್ಯಮಂತ್ರಿಗಳು ಇತ್ತೀಚೆಗಷ್ಟೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರನ್ನು ಭೇಟಿ ಈ ಬಗ್ಗೆ ಮನವಿ ಮಾಡಿಕೊಂಡಿದ್ದರು. ವಿಪಕ್ಷಗಳು ಆಡಳಿತ ನಡೆಸುವ ರಾಜ್ಯ ಸರಕಾರಗಳು ವಾದಿಸುವ ಪ್ರಕಾರ ಕೇಂದ್ರದಿಂದ 50 ಸಾವಿರ ಕೋಟಿ ರೂ. ಬಾಕಿ ಇದೆ. ಇದೇ ವೇಳೆ 18ರ ಸಭೆಯಲ್ಲಿ ಜಿಎಸ್‌ಟಿ ಸಂಗ್ರಹ, ಪರಿಹಾರ ನೀಡಿಕೆ, ಪರಿಹಾರ ಸೆಸ್ (ಕಾಂಪನ್‌ಸೇಷನ್ ಸೆಸ್) ಸಂಗ್ರಹದ ಬಿರುಸಿನ ಚರ್ಚೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.