![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 4, 2024, 12:49 AM IST
ಮುಂಬಯಿ: ಸತತ 3ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಒಕ್ಕೂಟವೇ ಅಧಿಕಾರಕ್ಕೆ ಬರಲಿದೆ ಎಂಬ ಮತಗಟ್ಟೆ ಸಮೀಕ್ಷೆಗಳ ವರದಿಯು ಮುಂಬಯಿ ಷೇರುಪೇಟೆಯಲ್ಲಿ ಮಿಂಚಿನ ಸಂಚಲನಕ್ಕೆ ಕಾರಣವಾಗಿದೆ. ಚುನಾವಣೋತ್ತರ ಸಮೀಕ್ಷೆಗಳ ಪರಿಣಾಮ ಎಂಬಂತೆ ಸೋಮವಾರ ಬಿಎಸ್‌ಇ ಸೆನ್ಸೆಕ್ಸ್ ಮತ್ತು ನಿಫ್ಟಿ 3 ವರ್ಷಗಳ ದಾಖಲೆ ಏರಿಕೆಗೆ ಸಾಕ್ಷಿಯಾದವಲ್ಲದೆ, ಸಾರ್ವಕಾಲಿಕ ಏರಿಕೆಯೊಂದಿಗೆ ವಹಿವಾಟು ಅಂತ್ಯಗೊಳಿಸಿವೆ. ಇದರ ಪರಿಣಾಮವೆಂಬಂತೆ ಹೂಡಿಕೆದಾರರ ಸಂಪತ್ತು ಕೂಡ 13.78 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಳವಾಗಿದೆ.
ವಹಿವಾಟಿನ ಆರಂಭದಲ್ಲೇ ಜಿಗಿತ ಕಂಡ ಬಿಎಸ್‌ಇ ಸೆನ್ಸೆಕ್ಸ್ ದಿನಾಂತ್ಯಕ್ಕೆ ಶೇ. 3.39ರಷ್ಟು ಅಂದರೆ ಬರೋಬ್ಬರಿ 2,507.47 ಅಂಕಗಳ ಏರಿಕೆ ಕಂಡಿತಾದರೆ, ದಾಖಲೆಯ 76,468.78ರಲ್ಲಿ ವಹಿವಾಟು ಅಂತ್ಯಗೊಳಿಸಿತು. ಒಂದು ಹಂತದಲ್ಲಿ ಬಿಎಸ್‌ಇ ಸೆನ್ಸೆಕ್ಸ್ 2,777 ಅಂಕಗಳ ವರೆಗೆ ಏರಿಕೆ ದಾಖಲಿಸಿತ್ತು. ಇನ್ನೊಂದೆಡೆ ನಿಫ್ಟಿ ಕೂಡ 733.20 ಅಂಕ ಹೆಚ್ಚಳವಾಗಿ, ದಿನಾಂತ್ಯಕ್ಕೆ 23,263.90ಕ್ಕೆ ತಲುಪಿತು. ಒಂದೇ ದಿನ ಬಿಎಸ್‌ಇ ಮತ್ತು ನಿಫ್ಟಿ ಇಷ್ಟೊಂದು ಜಿಗಿತ ಕಂಡಿದ್ದು 3 ವರ್ಷಗಳಲ್ಲೇ ಮೊದಲು. ಈ ಹಿಂದೆ 2001ರ ಫೆ. 1ರಂದು ಸೆನ್ಸೆಕ್ಸ್ ಮತ್ತು ನಿಫ್ಟಿ ಒಂದೇ ದಿನ ದೊಡ್ಡ ಮಟ್ಟದ ಏರಿಕೆ ಕಂಡಿದ್ದವು.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.