ಮುಂಬಯಿ ಶೇರು: 5 ದಿನದಲ್ಲಿ 1,100 ಅಂಕ ಕುಸಿತ; 100 ಬಿಲಿಯ ನಷ್ಟ
Team Udayavani, Aug 12, 2017, 11:47 AM IST
ಹೊಸದಿಲ್ಲಿ : ಮುಂಬಯಿ ಶೇರು ಪೇಟೆ ಈ ವಾರದ ಐದೂ ದಿನಗಳ ವಹಿವಾಟಿನಲ್ಲಿ ಒಟ್ಟಾರೆಯಾಗಿ 1,100 ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಗಿದೆ. ಇದರ ಪರಿಣಾಮವಾಗಿ ಹೂಡಿಕೆದಾರರು 100 ಶತಕೋಟಿ ಡಾಲರ್ ನಷ್ಟಕ್ಕೆ ಗುರಿಯಾಗಿದ್ದಾರೆ.
ಬಾಂಬೇ ಸ್ಟಾಕ್ ಎಕ್ಸ್‌ಚೇಂಜ್‌ನ ಈಗಿನ ಮಾರುಕಟ್ಟೆ ಬಂಡವಾಳ ಮೌಲ್ಯ 133.1 ಲಕ್ಷ ಕೋಟಿ ರೂ.ಗೆ ಕುಸಿಯುವ ಮೂಲಕ ಭಾರತೀಯ ಹೂಡಿಕೆದಾರರು ಸುಮಾರು 100 ಶತಕೋಟಿ ಡಾಲರ್ ಅಥವಾ 6.4 ಲಕ್ಷ ಕೋಟಿ ರೂ. ನಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಅಮೆರಿಕ – ಉತ್ತರ ಕೊರಿಯ ಹಾಗೂ ಭಾರತ -ಚೀನ ನಡುವಿನ ರಣೋತ್ಸಾಹದ ಪರಿಣಾವಾಗಿ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ಕುಸಿದಿವೆ. ಅಂತೆಯೇ ಮುಂಬಯಿ ಶೇರುಮಾರುಕಟ್ಟೆ ಈ ವಾರದ ಐದೂ ದಿನಗಳ ವಹಿವಾಟಿನಲ್ಲಿ 1,100 ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಗಿದೆ ಮತ್ತು ಭಾರತೀಯ ಹೂಡಿಕೆದಾರರ ಹೂಡಿಕೆ ಮೌಲ್ಯವು ಸುಮಾರು 6.4 ಲಕ್ಷ ಕೋಟಿ ರೂ.ಗಳಷ್ಟು ಕೊರೆದು ಹೋಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಶೇರು ಮಾರುಕಟ್ಟೆ ವಿಶ್ಲೇಷಕರ ಪ್ರಕಾರ ಏಶ್ಯ ಹಾಗೂ ಐರೋಪ್ಯ ಶೇರು ಮಾರುಕಟ್ಟೆಗಳಲ್ಲಿ ದುರ್ಬಲ ಪ್ರವೃತ್ತಿ ತಲೆದೋರಿದೆ. ಕಳೆದ ವಾರ ಸಾರ್ವಕಾಲಿಕ ದಾಖಲೆಯ ಹೊಸ ಎತ್ತರಗಳನ್ನು ತಲುಪಿದ್ದ ಶೇರು ಮಾರುಕಟ್ಟೆಗಳು ಈಗಿರುವ ಮಟ್ಟದಲ್ಲಿ ದೃಢತೆಯನ್ನು ಕಾಣಲು ಹೆಣಗುತ್ತಿವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ
Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.