ದ್ವಿತೀಯಾರ್ಧದಲ್ಲಿ ಆರ್ಥಿಕತೆ ಚೇತರಿಕೆ
ವಿತ್ತ ಸಚಿವೆ ನಿರ್ಮಲಾ ಆಶಾವಾದ
Team Udayavani, Sep 27, 2019, 6:00 AM IST
ಹೊಸದಿಲ್ಲಿ: ದೇಶದ ಆರ್ಥಿಕತೆಯು ಪ್ರಸ್ತುತ ಆರ್ಥಿಕ ವರ್ಷದ ದ್ವಿತೀಯಾರ್ಧದ ನಂತರ ಮೇಲೇರಲಿದೆ ಎಂಬ ಆಶಾವಾದವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವ್ಯಕ್ತಪಡಿಸಿದ್ದಾರೆ.
ಗುರುವಾರ, ಖಾಸಗಿ ಹಣಕಾಸು ಸಂಸ್ಥೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳ ಜತೆಗೆ ಮಾತುಕತೆ ನಡೆಸಿದ ಅವರು, “”ದೇಶದಲ್ಲಿ ನೋಟುಗಳ ಚಲಾವಣೆಯ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಈಗಲೂ ಬ್ಯಾಂಕುಗಳ ಸಾಲಗಳಿಗೆ ಸಾಕಷ್ಟು ಬೇಡಿಕೆಯಿದೆ. ದ್ವಿತೀಯಾರ್ಧದಲ್ಲಿ ಉತ್ಪನ್ನಗಳ ಬಳಕೆ ಹೆಚ್ಚಾಗಲಿದ್ದು, ಬ್ಯಾಂಕುಗಳ ಸಾಲ ನೀಡುವಿಕೆಯ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ದೇಶದ ಆರ್ಥಿಕತೆಯ ಬೆಳವಣಿಗೆಯೂ ಆಗಲಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
“ದೇಶದಲ್ಲಿ ಕೆಲ ದಿನಗಳಿಂದ ಉಂಟಾಗಿದ್ದ ಆರ್ಥಿಕ ಹಿಂಜರಿತ ಈಗ ನಿಧಾನವಾಗಿ ಮಾಯವಾಗುತ್ತಿದೆ. ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಹಲವಾರು ಹಬ್ಬಗಳು ಇರುವುದರಿಂದ ದೇಶದ ಜನತೆ ಹಬ್ಬದ ಖರೀದಿಯಲ್ಲಿ ತೊಡಗಿದ್ದಾರೆ. ಬಳಕೆಯು ಹೆಚ್ಚಾಗಿ ಆರ್ಥಿಕತೆ ಮೇಲೆರಲು ಸಹಾಯವಾಗುತ್ತದೆ’ ಎಂದು ಅವರು ವಿವರಿಸಿದರು.
ಕಾರು ಮಾರಾಟ ಸದ್ಯದಲ್ಲೇ ಏರಿಕೆ: “ಕಾರು ಮಾರಾಟ ಕುಸಿತ ಕೇವಲ ತಾತ್ಕಾಲಿಕವಾಗಿದ್ದು, ಮುಂದಿನ ಒಂದೆರಡು ತ್ತೈ ಮಾಸಿಕಗಳ ಅವಧಿಯಲ್ಲಿ ಕಾರು ಮಾರಾಟ ವಹಿವಾಟು ಏರಿಕೆಯಾಗಲಿದೆ ಎಂದು ಖಾಸಗಿ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳು ಹೇಳಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Editorial: ಕಾಳ್ಗಿಚ್ಚು ಸಂಭವಿಸುವ ಮುನ್ನವೇ ಇರಲಿ ಎಚ್ಚರಿಕೆ
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…
Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.