ಹೆದ್ದಾರಿಗಳಲ್ಲಿ ಚಾರ್ಜರ್ ಪಾಯಿಂಟ್ ಸ್ಥಾಪಿಸಲು ಸರಕಾರ ಸಿದ್ಧತೆ
Team Udayavani, Jan 30, 2020, 10:12 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ನವದೆಹಲಿ: ಭಾರತದಲ್ಲಿ ವಿವಿಧ ಕಾರು ಮತ್ತು ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಗಳು ತಮ್ಮ ವಿದ್ಯುತ್ ಚಾಲಿತ ವಾಹನಗಳನ್ನು ರಸ್ತೆಗಿಳಿಸಲು ರೆಡಿಯಾಗಿರುವಂತೆ ಭಾರತ ಸರಕಾರದ ಇಂಧನ ಸಚಿವಾಲಯ ದೇಶದ ವಿವಿಧ ಹೆದ್ದಾರಿಗಳ ಆಯ್ದ ಸ್ಥಳಗಳಲ್ಲಿ ಚಾರ್ಜರ್ ಪಾಯಿಂಟ್ ಗಳನ್ನು ನಿರ್ಮಾಣ ಮಾಡಲು ಭರದ ಸಿದ್ಧತೆಯಲ್ಲಿ ತೊಡಗಿದೆ.
ಇಂಧನ ಸಚಿವಾಲಯದ ಅಡಿಯಲ್ಲಿ ಬರುವ ಎನರ್ಜಿ ಎಫಿಷಿಯನ್ಸಿ ಸರ್ವಿಸಸ್ ಲಿಮಿಟೆಡ್ (EESL) ಈಗಾಗಲೇ ಭಾರತ್ ಹೆವೀ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ. ದೇಶದ ಅತೀ ದೊಡ್ಡ ಇಂಜಿನಿಯರಿಂಗ್ ಮತ್ತು ಮ್ಯಾನುಫ್ಯಾಕ್ಚರಿಂಗ್ ಎಂಟರ್ ಪ್ರೈಸಸ್ ದೇಶದಲ್ಲಿರುವ ಹೆದ್ದಾರಿಗಳ ಆಯ್ದ ಪ್ರದೇಶಗಳಲ್ಲಿ ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದೆ.
ಎಲೆಕ್ಟ್ರಿಕ್ ಮೊಬಿಲಿಟಿ ಕ್ಷೇತ್ರದಲ್ಲಿ ಇರಬಹುದಾದ ಅವಕಾಶಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಇ.ಇ.ಎಸ್.ಎಲ್. ಹಾಗೂ ಬಿ.ಹೆಚ್.ಇ.ಎಲ್.ಗಳು ಜಂಟಿಯಾಗಿ ಕಳೆದ ಕೆಲವು ತಿಂಗಳುಗಳಿಂದ ಕಾರ್ಯಪ್ರವೃತ್ತವಾಗಿವೆ. ಈ ಯೋಜನೆ ಭಾರತ ಸರಕಾರದ ನ್ಯಾಷನಲ್ ಇ-ಮೊಬಿಲಿಟಿ ಪ್ರೊಗ್ರಾಮ್ ಕಾರ್ಯಕ್ರಮದಡಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಸರಕಾರದ ಇಂಧನ ಕ್ಷಮತೆ ಸೇವಾ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ಹೆದ್ದಾರಿ ಬದಿಗಳಲ್ಲಿ ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿ ಅವುಗಳ ನಿರ್ವಹಣೆಯ ಹೊಣೆಯನ್ನೂ ಸಹ ಬಿ.ಹೆಚ್.ಇ.ಎಲ್. ಹೊತ್ತುಕೊಳ್ಳಲಿದೆ. ಇನ್ನು ಎಲ್ಲೆಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಗುರುತಿಸುವ ಹೊಣೆಯನ್ನೂ ಸಹ ಇದೇ ಸಂಸ್ಥೆ ವಹಿಸಿಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.