ಹಬ್ಬದ ಸೀಜನ್‌ ದುಬಾರಿ ಪ್ರಯಾಣ; ಮೂರುಪಟ್ಟು ಅಲ್ಲ ಹಲವು ಪಟ್ಟು ದರ ಹೆಚ್ಚಳ

ವಿಚಿತ್ರವೆಂದರೆ ತಿಂಗಳು ಮೊದಲೇ ಬುಕಿಂಗ್‌ ಮಾಡಿದ್ದರೆ, ಪ್ರಯಾಣಿಕರು ಈ ಮೊತ್ತದಲ್ಲಿ ವಿಮಾನಗಳಲ್ಲೇ ಪ್ರಯಾಣಿಸಬಹುದು.

Team Udayavani, Dec 22, 2022, 11:55 AM IST

ಹಬ್ಬದ ಸೀಜನ್‌ ದುಬಾರಿ ಪ್ರಯಾಣ; ಮೂರುಪಟ್ಟು ಅಲ್ಲ ಹಲವು ಪಟ್ಟು ದರ ಹೆಚ್ಚಳ

ಬೆಂಗಳೂರು: ಮತ್ತೊಂದು ಹಬ್ಬದ ಸೀಜನ್‌. ಪ್ರಯಾಣಿಕರಿಗೆ ಮತ್ತದೇ ದುಬಾರಿ ಪ್ರಯಾಣದ “ಬರೆ’! ಹೌದು, ಕ್ರಿಸ್‌ಮಸ್‌ ರಜೆ ಹಿನ್ನೆಲೆಯಲ್ಲಿ ನಗರದಿಂದ ಬಹುತೇಕರು ತಮ್ಮ ಊರುಗಳು ಮತ್ತು ಪ್ರವಾಸಿ ತಾಣಗಳಿಗೆ ಹೋಗುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಇನ್ನೂ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡುವುದಾಗಿಯೂ ಹೇಳಿಲ್ಲ. ಈ ಅವಕಾಶವನ್ನು ಅಕ್ಷರಶಃ ಪ್ರಯಾಣಿಕರ ಸುಲಿಗೆಗೆ ಬಳಸಿಕೊಳ್ಳಲು ಖಾಸಗಿ ಸಾರಿಗೆ ಸಂಸ್ಥೆಗಳು ಮತ್ತು
ಬುಕಿಂಗ್‌ ಏಜೆನ್ಸಿಗಳು ಸಜ್ಜಾಗಿವೆ.

ದುಪ್ಪಟ್ಟು ಮೂರುಪಟ್ಟು ಅಲ್ಲ ಹಲವು ಪಟ್ಟು ಹೆಚ್ಚಳ ಮಾಡಲಾಗಿದೆ. ಉದಾಹರಣೆಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಡಿ. 25ಕ್ಕೆ ಪ್ರೀಮಿಯಂ ಬಸ್‌ ಪ್ರಯಾಣದರ 8 ಸಾವಿರ ಇದ್ದರೆ, ಬೆಂಗಳೂರಿನಿಂದ ಎರ್ನಾಕುಲಂಗೆ ಅದೇ ದಿನ 7 ಸಾವಿರ ಇದೆ. ಇದೇ ಮಾರ್ಗಗಳಲ್ಲಿ ಹೊಸ ವರ್ಷಕ್ಕೆ ಅಂದರೆ ಜ. 1ಕ್ಕೆ ನೀವು ವಾಪಸ್‌ ಬರಲು ಇದೇ ಮೊತ್ತವನ್ನು ಪಾವತಿಸಬೇಕಾಗಿದೆ.

ಬೆಂಗಳೂರಿನಿಂದ ಎರ್ನಾಕುಲಂ ಪ್ರಯಾಣಕ್ಕೂ 7 ಸಾವಿರ ದರ ಇದೆ. ಮಂಗಳೂರಿಗೆ 3,500 , ಮೈಸೂರಿಗೆ 5 ಸಾವಿರ, ಮಡಿಕೇರಿಗೆ 1,600 ದರ ನಿಗದಿಯಾಗಿರುವುದು ವೆಬ್‌ಸೈಟ್‌ಗಳಲ್ಲಿ ತೋರಿಸುತ್ತಿದೆ. ವಿಚಿತ್ರವೆಂದರೆ ತಿಂಗಳು ಮೊದಲೇ ಬುಕಿಂಗ್‌ ಮಾಡಿದ್ದರೆ, ಪ್ರಯಾಣಿಕರು ಈ ಮೊತ್ತದಲ್ಲಿ ವಿಮಾನಗಳಲ್ಲೇ ಪ್ರಯಾಣಿಸಬಹುದು.

ಕ್ರಿಸ್‌ಮಸ್‌ ಪ್ರಯುಕ್ತ ಮುಂದಿನ ವಾರ ಬಹುತೇಕ ಖಾಸಗಿ ಶಾಲೆಗಳಿಗೆ ರಜೆ ಇದ್ದುದರಿಂದ ಬೇಡಿಕೆ ಹೆಚ್ಚಾಗಿದೆ. ಆದರೆ, ಹೊರ ಊರುಗಳಿಗೆ ತೆರಳಲು ಖಾಸಗಿ ಬಸ್‌ಗಳನ್ನು ಹತ್ತಲು ಮುಂದಾದವರು ಪ್ರಯಾಣ ದರ ನೋಡಿ ಗಾಬರಿಗೊಳ್ಳುತ್ತಿದ್ದಾರೆ. ಹಬ್ಬ ಮತ್ತು ಸರ್ಕಾರಿ ರಜೆಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳವಾಗದಂತೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದರು. ಸಾರಿಗೆ ಅಧಿಕಾರಿಗಳು ಖಾಸಗಿ ಬಸ್‌ ಆಪರೇಟರ್‌ಗಳ ಸಭೆಯನ್ನೂ ಈ ಹಿಂದೆ ಮಾಡಿದ್ದರು. ಅದಾವುದಕ್ಕೂ ಬಸ್‌ ಮಾಲಿಕರು ಸೊಪ್ಪುಹಾಕಿಲ್ಲ.

ಕೆಎಸ್‌ಆರ್‌ಟಿಸಿ ಬಸ್‌ ಗಳಲ್ಲಿ ಮಾತ್ರ ಪ್ರಯಾಣ ದರ ಸಾಮಾನ್ಯ ದಿನಗಳಷ್ಟೇ ಇದೆ. ಹೊರ  ರಾಜ್ಯಗಳಿಗೆ ವಿಶೇಷ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದು ಕೆಎಸ್‌ಆರ್‌ಟಿಸಿಗೆ ಕಷ್ಟದ ಕೆಲಸ. ಬೇಡಿಕೆ ಆಧರಿಸಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಿದರೆ, ಅಂತರರಾಜ್ಯ ಒಪ್ಪಂದ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಹೆಚ್ಚುವರಿ ಬಸ್‌ ಗಳನ್ನು ಕಾರ್ಯಾಚರಣೆ ಮಾಡುವುದು ಕಷ್ಟ. ಇದರ ನಡುವೆಯೂ ಕ್ರಿಸ್‌ಮಸ್‌ ರಜೆಯಲ್ಲಿ ಪ್ರಯಾಣಿಕರಿಗೆ ಅನುಕೂಲ ಮಾಡಲು ಹೆಚ್ಚುವರಿ 300 ವಿಶೇಷ ಬಸ್‌ ಗಳನ್ನು ಕಾರ್ಯಾಚರಣೆಗೆ ಇಳಿಸಲಾಗಿದೆ ಎಂದು ಕೆಎಸ್‌ ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.