ಇ-ಕಾಮರ್ಸ್‌ನಲ್ಲಿ ಫ್ಲಾಶ್ ಸೇಲ್ ನಿಷೇಧ?
Team Udayavani, Jun 22, 2021, 7:31 AM IST
ನವದೆಹಲಿ: ಇ-ಜಾಲತಾಣಗಳಲ್ಲಿ ಯಾವುದೇ ಉತ್ಪನ್ನವನ್ನು ಫ್ಲಾಶ್ ಸೇಲ್ ಅಡಿಯಲ್ಲಿ ಮಾರಾಟ ಮಾಡುವುದಕ್ಕೆಕೇಂದ್ರ ಸರ್ಕಾರ ನಿರ್ಬಂಧ ಹೇರಲು ನಿರ್ಧರಿಸಿದೆ. ಫ್ಲಾಶ್ ಸೇಲ್ ಹೆಸರಿನಲ್ಲಿ ನಕಲಿ ಕಂಪನಿಗಳು, ತಮ್ಮ ಉತ್ಪನ್ನಗಳನ್ನು ಗ್ರಾಹಕರಿಗೆ ಮಾರಾಟ ಮಾಡುವುದಕ್ಕೆ ಲಗಾಮು ಹಾಕುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ.
ಫ್ಲಾಶ್ ಸೇಲ್‌ನಿರ್ಬಂಧದಜೊತೆ,ಪ್ರತಿಯೊಂದು “ಇ-ಕಾಮರ್ಸ್’ ಜಾಲತಾಣ ತನ್ನಲ್ಲಿ ಅನುಸರಣ ಅಧಿಕಾರಿ ಹಾಗೂ ಸಾರ್ವಜನಿಕರ ಕುಂದು-ಕೊರತೆ ಆಲಿಸುವ ಅಧಿಕಾರಿಗಳನ್ನು ನೇಮಿಸುವ ಅಂಶಗಳುಳ್ಳ ಕರಡು ಪ್ರತಿಯನ್ನು ಈಗಾಗಲೇ ಪ್ರಕಟಿಸಲಾಗಿದೆ.
ಸಾರ್ವಜನಿಕರಿಂದ ಸಲಹೆ- ಅಭಿಪ್ರಾಯಗಳನ್ನು ಪಡೆದು ಆನಂತರ ಈ ನಿಯಮಗಳ ಜಾರಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಈ ಹೊಸ ನಿಯಮಗಳ ಜಾರಿಗಾಗಿ, 2020ರ ಇ-ಕಾಮರ್ಸ್ ಗ್ರಾಹಕರ ಹಕ್ಕುಗಳ ಸಂರಕ್ಷಣಾ ನಿಯಮಗಳನ್ನು ಪರಿಷ್ಕರಣೆ ಮಾಡಲು ತೀರ್ಮಾನಿಸಲಾಗಿದೆ. 2020ರ ಇ-ಕಾಮರ್ಸ್ ಗ್ರಾಹಕರ ಹಕ್ಕುಗಳ ಸಂರಕ್ಷಣಾ ನಿಯಮಗಳನ್ನು ಕಳೆದ ವರ್ಷ ಜುಲೈನಲ್ಲಿ ಪ್ರಕಟಿಸಲಾಗಿತ್ತು. ಈ ನಿಯಮಗಳನ್ನು ಉಲ್ಲಂ ಸುವ ಇ-ಕಾಮರ್ಸ್ ಜಾಲತಾಣಗಳಿಗೆ ದಂಡ ವಿಧಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.