ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

NCERT ಪಠ್ಯಪುಸ್ತಕಗಳನ್ನು ದೇಶದೆಲ್ಲೆಡೆ ಮಾರಾಟ ಮಾಡಿ ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಉದ್ದೇಶ

Team Udayavani, Dec 17, 2024, 2:44 PM IST

2-

ಬೆಂಗಳೂರು: ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಜೊತೆಗೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ.

ದೇಶಾದ್ಯಂತ NCERT ಪುಸ್ತಕಗಳು ಕೈಗೆಟುಕುವ ಮತ್ತು ತಡೆರಹಿತವಾಗಿ ಲಭ್ಯವಾಗುವಂತೆ ಮಾಡುವುದು ಈ ಮಹತ್ವದ ಒಪ್ಪಂದದ ಉದ್ದೇಶವಾಗಿದೆ.

2 ಮತ್ತು 3ನೇ ಶ್ರೇಣಿಯ ನಗರಗಳು ಸೇರಿದಂತೆ ದೇಶಾದ್ಯಂತ ವಿಸ್ತಾರವಾಗಿರುವ ಫ್ಲಿಪ್ ಕಾರ್ಟ್ ನ ಸೇವೆಯ ಉಪಸ್ಥಿತಿಯನ್ನು ಬಳಸಿಕೊಂಡು ವಿದ್ಯಾರ್ಥಿಗಳು ಮತ್ತು ಕಲಿಯುವವರಿಗೆ NCERT ಪಠ್ಯಗಳನ್ನು ಪೂರೈಸಲಾಗುತ್ತದೆ. ಈ ಸಹಭಾಗಿತ್ವದಡಿಯಲ್ಲಿ ಫ್ಲಿಪ್ ಕಾರ್ಟ್ ತನ್ನ ಆನ್ಲೈನ್ ಮಾರ್ಕೆಟ್ ಪ್ಲೇಸ್ ಮೂಲಕ NCERT ಪಠ್ಯಗಳನ್ನು ಮಾರಾಟ ಮತ್ತು ವಿತರಣೆ ಮಾಡಲಿದೆ. ಇದರೊಂದಿಗೆ NCERT ನಿಂದ ನಿಗದಿಪಡಿಸಿದ ಅಧಿಕೃತ ಮಾರಾಟಗಾರರ ಮೂಲಕ ಹೆಚ್ಚಿನ ಜನರನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳಲಿದೆ.

ಶಿಕ್ಷಣದ ಪ್ರವೇಶವನ್ನು ಸಾರ್ವತ್ರೀಕರಣಗೊಳಿಸುವ ಉದ್ದೇಶದಿಂದ ಮತ್ತು ರಾಷ್ಟ್ರವ್ಯಾಪಿ ಅಂತರ್ಗತ ಕಲಿಕೆಯ ಅವಕಾಶಗಳನ್ನು ಉತ್ತೇಜಿಸುವ ಭಾರತ ಸರ್ಕಾರದ ಧ್ಯೇಯಕ್ಕೆ ಪೂರಕವಾಗಿ ಈ ಸಹಭಾಗಿತ್ವವನ್ನು ಒಪ್ಪಂದದ ಮೂಲಕ ಅಧಿಕೃತಗೊಳಿಸಲಾಗಿದೆ.

ಭಾರತ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಶಿಕ್ಷಣ ಸಚಿವಾಲಯದ ರಾಜ್ಯ ಸಚಿವ(ಸ್ವತಂತ್ರ ಉಸ್ತುವಾರಿ), ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ರಾಜ್ಯ ಸಚಿವ ಜಯಂತ್ ಚೌಧರಿ ಮತ್ತು ಫ್ಲಿಪ್ ಕಾರ್ಟ್ ಗ್ರೂಪ್ ನ ಚೀಫ್ ಕಾರ್ಪೊರೇಟ್ ಅಫೇರ್ಸ್ ಆಫೀಸರ್ ರಜನೀಶ್ ಕುಮಾರ್ ಉಪಸ್ಥಿತಿಯಲ್ಲಿ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ದೆಹಲಿಯ NCERT ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಣ ಸಚಿವಾಲಯ ಮತ್ತು NCERT ಅಧಿಕಾರಿಗಳು ಮತ್ತು ಫ್ಲಿಪ್ ಕಾರ್ಟ್ ಅಧಿಕಾರಿಗಳು ಪರಸ್ಪರ ಒಡಂಬಡಿಕೆಗೆ ಸಹಿ ಹಾಕಿದರು. ಇದು ದೇಶಾದ್ಯಂತ ಗುಣಮಟ್ಟದ ಶೈಕ್ಷಣಿಕ ಸಂಪನ್ಮೂಲಗಳಿಗೆ ಹೆಚ್ಚಿನ ಪ್ರವೇಶವನ್ನು ಉತ್ತೇಜಿಸುವಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಈ ಸಹಯೋಗದಡಿ ಫ್ಲಿಪ್ ಕಾರ್ಟ್ ನಗರ ಮತ್ತು ಗ್ರಾಮೀಣ ಭಾರತದಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ NCERT ಪಠ್ಯಗಳನ್ನು ಸುಲಭವಾಗಿ ಪಡೆದುಕೊಳ್ಳುವಂತೆ ಮಾಡುವ ಮೂಲಕ ವ್ಯಾಪಕ ವ್ಯಾಪ್ತಿಯನ್ನು ಖಚಿತಪಡಿಸುತ್ತದೆ. ಇದಲ್ಲದೇ, ಅಧಿಕೃತ ಉತ್ತಮ ಗುಣಮಟ್ಟದ ವಿಷಯದ ಲಭ್ಯತೆಯನ್ನು ಖಾತರಿಪಡಿಸಲು ಫ್ಲಿಪ್ ಕಾರ್ಟ್ ಮತ್ತು NCERT ಒಟ್ಟಾಗಿ ಕೆಲಸ ಮಾಡಲಿವೆ.

ಒಪ್ಪಂದಕ್ಕೆ ಸಹಿ ಹಾಕಿದ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಭಾರತದ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುವಲ್ಲಿ NCERT ಪ್ರಮುಖ ಪಾತ್ರ ವಹಿಸಿದೆ. ಫ್ಲಿಪ್ ಕಾರ್ಟ್ ನೊಂದಿಗೆ ಮಾಡಿಕೊಂಡಿರುವ ಸಹಯೋಗ ಎಲ್ಲರಿಗೂ ಕೈಗೆಟುಕುವ ಮತ್ತು ಸುಲಭವಾಗಿ ಪಡೆದುಕೊಳ್ಳಬಹುದಾದ ಶಿಕ್ಷಣವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಪರಿವರ್ತಕವಾದ ಹೆಜ್ಜೆಯನ್ನು ಇಟ್ಟಿದೆ. ಫ್ಲಿಪ್ ಕಾರ್ಟ್ ನ ವ್ಯಾಪಕವಾದ ತಾಂತ್ರಿಕ ಮತ್ತು ಲಾಜಿಸ್ಟಿಕಲ್ ವ್ಯಾಪ್ತಿಯನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಈ ಪಾಲುದಾರಿಕೆಯು NCERT ಪುಸ್ತಕಗಳ ಲಭ್ಯತೆಯನ್ನು ಹೆಚ್ಚು ಮಾಡುತ್ತದೆ ಎಂದರು.

ಟಾಪ್ ನ್ಯೂಸ್

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು

Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1-bntwl-1

Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

Shakikanth-RBI

Financial Policy: ಭದ್ರತೆ ಇಲ್ಲದ ಕೃಷಿ ಸಾಲ ಮಿತಿ 2 ಲಕ್ಷ ರೂ.ಗೆ ಏರಿಕೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

8

Udupi: ಅಂಬಲಪಾಡಿ ಓವರ್‌ಪಾಸ್‌ ಕಾಮಗಾರಿ ಆರಂಭ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.