ಆರ್ಥಿಕ ಬೆಳವಣಿಗೆ ನಿರೀಕ್ಷೆಗಿಂತ ಹೆಚ್ಚು ಕುಂಠಿತವಾಗಲಿದೆ : ಐಸಿಆರ್‌ಎ
Team Udayavani, Nov 21, 2019, 8:28 PM IST
ಹೊಸದಿಲ್ಲಿ: ಭಾರತದ ಆರ್ಥಿಕ ಬೆಳವಣಿಗೆ ನಿರೀಕ್ಷೆಗಿಂತ ಹೆಚ್ಚು ಕುಂಠಿತವಾಗಲಿದೆ ಎಂದು ಅಂತಾರಾಷ್ಟ್ರೀಯ ರೇಟಿಂಗ್ ಏಜನ್ಸಿ ಐಸಿಆರ್‌ಎ ಅಭಿಪ್ರಾಯ ವ್ಯಕ್ತಪಡಿಸಿದೆ. ಕೈಗಾರಿಕಾ ವಲಯದ ಉತ್ಪಾದನೆ ಕುಸಿತ ಸೇರಿದಂತೆ ಆರ್ಥಿಕ ವ್ಯವಸ್ಥೆಯ ವಿವಿಧ ವಲಯಗಳಲ್ಲಿನ ಅನಿಶ್ಚಿತತೆಯಿಂದಾಗಿ ಭವಿಷ್ಯದ ಆರ್ಥಿಕ ಬೆಳವಣಿಗೆ ದರ ನಿರೀಕ್ಷೆಗಿಂತ ಕಡಿಮೆಯಾಗಲಿದೆ ಎಂದು ಐಸಿಆರ್‌ಎ ಸಂಸ್ಥೆ ಪ್ರಧಾನ ಅರ್ಥಶಾಸ್ತ್ರಜ್ಞ ಅದಿತಿ ನಾಯರ್ ಹೇಳಿದ್ದಾರೆ.
2020ರ ಹಣಕಾಸು ವರ್ಷದ ಎರಡನೇ ತ್ತೈಮಾಸಿಕದಲ್ಲಿ ಬೆಳವಣಿಗೆ ದರ ಶೇ.4.7ರಷ್ಟು ಇರಲಿದೆ ಎಂದು ಅಂದಾಜಿಸಿದ್ದು, ರೇಟಿಂಗ್ಸ್ ಏಜೆನ್ಸಿಯು ದೇಶದ ಜಿಡಿಪಿ ಬೆಳವಣಿಗೆಯ ದರ ಮತ್ತು ಒಟ್ಟಾರೆ ಮೌಲ್ಯ ಸೇರ್ಪಡೆ (ಜಿವಿಎ) ಮತ್ತಷ್ಟು ಕುಸಿತ ಕಾಣಲಿದೆ ಎಂದು ನಿರೀಕ್ಷಿಸಿದೆ.
2020ರ ವಿತ್ತೀಯ ವರ್ಷದ ಎರಡನೇ ತ್ತೈಮಾಸಿಕದಲ್ಲಿ ಮೂಲ ಬೆಲೆಗಳು ವರ್ಷದಿಂದ ವರ್ಷಕ್ಕೆ ಕ್ರಮವಾಗಿ ಶೇ.4.7ರಷ್ಟು ಮತ್ತು 4.5ರಷ್ಟು ಇರಲಿದ್ದು, ಮೊದಲ ತ್ತೈಮಾಸಿಕದಲ್ಲಿ ಶೇ.5 ಮತ್ತು ಶೇ.4.9ರಷ್ಟು ಇರಲಿದೆ. ಆದರೂ ಕೃಷಿ ಮತ್ತು ಸೇವೆಗಳಂತಹ ಕ್ಷೇತ್ರಗಳು 2020ರ ಎಫ್ವೈನ ಮೊದಲ ತ್ತೈಮಾಸಿಕದಲ್ಲಿ ಬೆಳವಣಿಗೆಯ ದರ ಕಾಯ್ದುಕೊಳ್ಳಲು ಸಾಧ್ಯವಾಗಲಿದೆ ಎಂದಿದೆ.
ದೇಶಿಯ ಆಂತರಿಕ ಬೇಡಿಕೆ, ಹೂಡಿಕೆ ಚಟುವಟಿಕೆ ಮತ್ತು ತೈಲೇತರ ಸರಕುಗಳ ರಫ್ತುಗಳ ಜತೆಗೆ ಉತ್ಪಾದನಾ ಬೆಳವಣಿಗೆಯು 2020ರ ಎಪ್‌ವೈನ ಮೊದಲ ತ್ತೈಮಾಸಿಕದಲ್ಲಿ ಕನಿಷ್ಠ ಶೇ.0.6ರಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಐಸಿಆರ್‌ಎನ ಪ್ರಧಾನ ಅರ್ಥಶಾಸ್ತ್ರಜ್ಞ ಅದಿತಿ ನಾಯರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.