ತೈಲ ಬೆಲೆ ಇಳಿಕೆಗೆ ಬ್ರೆಂಟ್ ಕಚ್ಚಾ ತೈಲ ಬೆಲೆ ಏರಿಕೆ ಅಡ್ಡಿಯಾಗುತ್ತಿದೆಯೆ..!?
Team Udayavani, Mar 10, 2021, 12:02 PM IST
ನವ ದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಅಂದರೆ, ಬ್ರೆಂಟ್ ಕಚ್ಚಾ ತೈಲ ಬೆಲೆ ಬೆಲೆ ಮತ್ತೆ ನಿರಂತರವಾಗಿ ಏರಿಕೆ ಕಂಡಿದೆ ಸೌದಿ ಅರೇಬಿಯಾದ ತೈಲ ಮಾರುಕಟ್ಟೆಯ ದೈತ್ಯ ಎನ್ನಿಸಿಕೊಂಡಿರುವ ARAMCO(ಸೌದಿ ಅರೇಬಿಯಾದ ತೈಲ ಕಂಪೆನಿ) ಮಾಲೀಕತ್ವದ ಫೆಸಿಲಿಟಿಗಳ ಮೇಲೆ ಮಿಸೈಲ್ ದಾಳಿಯ ಬಳಿಕ ಬ್ರೆಂಟ್ ಕಚ್ಚಾ ತೈಲ ಬೆಲೆ ಬೆಲೆಯಲ್ಲಿ ಶೇ.2 ರಷ್ಟು ಏರಿಕೆಯಾಗಿರುವುದನ್ನು ಗಮನಿಸಬಹುದಾಗಿ.
ದಿನಬಳಕೆಯ ಅಗತ್ಯಗಳಲ್ಲಿ ಒಂದಾಗಿರುವ ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಬೆಲೆಯ ಕಾರಣದಿಂದಾಗಿ ಭಾರತದ ಜನರು ಕಂಗೆಟ್ಟು ಹೋಗಿದ್ದಾರೆ.
ಓದಿ : ರಾಬರ್ಟ್ ಹಬ್ಬಕ್ಕೆ ಒಂದೇ ದಿನ ಬಾಕಿ: ಅಭಿಮಾನಿಗಳ ಜೊತೆಗೆ ಇಡೀ ಚಿತ್ರರಂಗಕ್ಕೂ ನಿರೀಕ್ಷೆ..!
ಹಾದಿ ಬೀದಿಗಳಿಂದ ಆರಂಭವಾಗಿ ಸಂಸತ್ತಿನವರೆಗೂ ಕೂಡ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಕುರಿತಾದ ಚರ್ಚೆಗಳು ನಡೆಯುತ್ತಿವೆ. ಇನ್ನೊಂದೆಡೆ ಸರ್ಕಾರದ ಮೇಲೆ ಅಬಕಾರಿ ಸುಂಕ ಕಡಿಮೆ ಮಾಡುವಂತೆ ಒತ್ತಡ ಕೂಡ ಹೇರಲಾಗುತ್ತಿದೆ. ಪೆಟ್ರೋಲ್ ಡಿಸೇಲ್ ಬೆಲೆಗಳು ಯಾವಾಗ ಇಳಿಕೆಯಾಗಲಿದೆಯೇ..? ಅಥವಾ ಇಳಿಕೆಯಾಗುವುದಾದರೇ ಯಾವಾಗ ಇಳಿಕೆಯಾಗುತ್ತದೆ ಎಂಬ ಪ್ರಶ್ನೆ ಜನ ಸಾಮಾನ್ಯರನ್ನು ಕಾಡುತ್ತಿದೆ.
ಅಂತಾರಾಷ್ಟ್ರೀಯ ತೈಲೋತ್ಪನ್ನ ಮಾರುಕಟ್ಟೆಯಲ್ಲಿ ಕಚ್ಚಾತೈಲ ಅಥವಾ ಬ್ರೆಂಟ್ ಕ್ರೂಡ್ ಆಯಿಲ್ ಬೆಲೆ ಏರಿಕೆ ಮುಂದುವರೆದಿದೆ.
20 ತಿಂಗಳ ಅವಧಿಯಲ್ಲಿಯೇ ಗರಿಷ್ಟ ಮಟ್ಟವನ್ನು ತಲುಪಿದ ಬ್ರೆಂಟ್ ಕಚ್ಚಾ ತೈಲ ಬೆಲೆ, ಸೋಮವಾರ(ಮಾ. 8) 70 ಡಾಲರ್ ಪ್ರತಿ ಬ್ಯಾರೆಲ್ ಗೆ ತಲುಪಿತ್ತು. ಇದು ಕಳೆದ 20 ತಿಂಗಳ ಅತ್ಯಂತ ಗರಿಷ್ಟಮಟ್ಟವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಕಳೆದ ಗುರುವಾರ ನಡೆದ OPEC+ ರಾಷ್ಟ್ರಗಳ ನಡುವೆ ನಡೆದ ಸಭೆಯಲ್ಲಿ ಬ್ರೆಂಟ್ ಕಚ್ಚಾ ತೈಲ ಬೆಲೆ ಉತ್ಪಾದನೆಯನ್ನು ಹೆಚ್ಚಿಸುವ ಪ್ರಸ್ತಾವಕ್ಕೆ ಪೂರಕ ಪ್ರತಿಕ್ರಿಯೆ ಬಂದಿದೆ ಎಂಬ ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲ ಬೆಲೆಯಲ್ಲಿ 6 ಡಾಲರ್ ಹೆಚ್ಚಳವಾಗಿದೆ. ಇದು ತೈಲವನ್ನು ಆಮದು ಮಾಡಿಕೊಳ್ಳುವ ದೇಶಗಳ ಮೇಲೆ ಪ್ರಭಾವ ಬೀರಲಿದೆ.
ಓದಿ : ತೈಲೋತ್ಪನ್ನವನ್ನು ಹೆಚ್ಚಿಸಿ, ಆರ್ಥಿಕತೆಯ ಚೇತರಿಕೆಗೆ ಸಹಕರಿಸಿ : OPECಗೆ ಭಾರತದ ಮನವಿ
ಇನ್ನು, ಕಳೆದ 9 ದಿನಗಳಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಕಂಡುಬಂದಿಲ್ಲ.
ತೈಲೋತ್ಪಾದನೆಯ ಮೇಲಿನ ನಿಯಂತ್ರಣವನ್ನು ತೆಗೆದು ಹಾಕುವ ಕುರಿತು ಭಾರತ ಮಾಡಿರುವ ಮನವಿಯನ್ನು ಒಪೆಕ್ + ರಾಷ್ಟ್ರಗಳ ಸಭೆ ತಳ್ಳಿ ಹಾಕಿದ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತನ್ನ ಎರಡು ವರ್ಷದ ಗರಿಷ್ಟ ಮಟ್ಟಕ್ಕೆ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ಕಚ್ಚಾ ತೈಲೋತ್ಪನ್ನ ರಾಷ್ಟ್ರಗಳು ತಮ್ಮ ತೈಲ ಉತ್ಪಾದನೆಯನ್ನು ಹೆಚ್ಚಿಸದೇ ಹೋದಲ್ಲಿ ಇಂಧನ ಬೆಳೆಗಳು ಮತ್ತಷ್ಟು ಏರಿಕೆಯಾಗಲಿವೆ ಎನ್ನುವುದು ಖಚಿತ.
ಅಷ್ಟೇ ಯಾಕೆ ಪೆಟ್ರೋಲ್ ಡಿಸೇಲ್ ಬೆಲೆ ರೂ. 100ರ ಗಡಿ ದಾಟುವ ಸಾಧ್ಯತೆಯನ್ನು ಕೂಡ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ದೇಶದ ಕೆಲವು ರಾಜ್ಯಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100ರ ಸನಿಹ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.